ಬಿಡದಿ ನಿತ್ಯಾನಂದ ಸ್ಬಾಮಿ ವಿರುದ್ಧ ಪ್ರಕರಣದ ಕುರಿತಂತೆ ರಾಜ್ಯ ಪೊಲೀಸರಿಗೆ ಸ್ಟಷ್ಟನೆ ಕೇಳಿದ ಇಂಟರ್ ಪೊಲ್

Nithyanandaswamy case : ಅತ್ಯಾಚಾರ ಆರೋಪ ಸೇರಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿಕೊಂಡು ದೇಶದಿಂದ ತಲೆಮರೆಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ಬಿಡದಿ ನಿತ್ಯಾನಂದಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಟರ್ ಪೊಲ್ ಕರ್ನಾಟಕ ಪೊಲೀಸರಿಂದ ಸ್ಪಷ್ಟನೆ ಕೇಳಿದೆ. 

Written by - Bhavya Sunil Bangera | Edited by - Savita M B | Last Updated : Aug 31, 2023, 02:18 PM IST
  • ಅತ್ಯಾಚಾರ ಆರೋಪ ಸೇರಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿಕೊಂಡ ನಿತ್ಯಾನಂದಸ್ವಾಮಿ
  • ಇಂಟರ್ ಪೊಲ್ ಕರ್ನಾಟಕ ಪೊಲೀಸರಿಂದ ಸ್ಪಷ್ಟನೆ ಕೇಳಿದೆ.
  • ತನಿಖೆ‌ ನಡೆಸುತ್ತಿರುವ ಸಿಐಡಿಯು ಇಂಟರ್ ಪೊಲ್ ಕೇಳಿದ ಪ್ರಶ್ನೆಗಳಿಗೆ ಸಮಗ್ರವಾಗಿ ಉತ್ತರಿಸಿದೆ.
ಬಿಡದಿ ನಿತ್ಯಾನಂದ ಸ್ಬಾಮಿ ವಿರುದ್ಧ ಪ್ರಕರಣದ ಕುರಿತಂತೆ ರಾಜ್ಯ ಪೊಲೀಸರಿಗೆ ಸ್ಟಷ್ಟನೆ ಕೇಳಿದ ಇಂಟರ್ ಪೊಲ್ title=

ಬೆಂಗಳೂರು: ನಿತ್ಯಾನಂದ ವಿರುದ್ಧ ಆತ್ಯಾಚಾರ, ವಂಚನೆ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ ಹಿನ್ನೆಲೆ ಕರ್ನಾಟಕ, ತಮಿಳುನಾಡು ಹಾಗೂ ಗುಜರಾತ್ ಗಳಲ್ಲಿ ಪ್ರಕರಣ ದಾಖಲಾಗಿದ್ದು ಈತನ ವಿರುದ್ಧ ಕರ್ನಾಟಕ ಹಾಗೂ ಗುಜರಾತ್ ಪೊಲೀಸರು ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೊಟೀಸ್ ನೀಡುವಂತೆ ಇಂಟರ್ ಪೊಲ್ ಗೆ ಪತ್ರ ಬರೆದು ಮನವಿ ಮಾಡಿತ್ತು. ಇದರಂತೆ‌‌ ಕರ್ನಾಟಕ ಪೊಲೀಸರಿಗೆ ಪತ್ರ ಬರೆದು ಸ್ಪಷ್ಟನೆ ಕೇಳಿತ್ತು.‌

ತನಿಖೆ‌ ನಡೆಸುತ್ತಿರುವ ಸಿಐಡಿಯು ಇಂಟರ್ ಪೊಲ್ ಕೇಳಿದ ಪ್ರಶ್ನೆಗಳಿಗೆ ಸಮಗ್ರವಾಗಿ ಉತ್ತರಿಸಿದೆ. ನಿತ್ಯಾನಂದ ವಿರುದ್ಧ ದಾಖಲಾಗಿರುವ ಪ್ರಕರಣ, ಅಪರಾಧದ ಸ್ವರೂಪ, ಇರುವ ಕಾನೂನಾತ್ಮಕ ಪ್ರಕ್ರಿಯೆಗಳ ಬಗ್ಗೆ ಇಂಟರ್ ಪೋಲ್ ಮಾಹಿತಿ ಕೇಳಿದೆ ಎನ್ನಲಾಗಿದ್ದು ಈ ಸಂಬಂಧ ಪ್ರತಿಯಾಗಿ ಸಿಐಡಿ ಸ್ಪಷ್ಟನೆ ನೀಡಿ ಪತ್ರ ಬರೆದಿದೆ.

ಇದನ್ನೂ ಓದಿ-HD Kumaraswamy Health Updates: ಎಚ್​​ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ​ ಹೇಳಿದ್ದೇನು..?

ನಿತ್ಯಾನಂದ ವಿರುದ್ಧ 2019ರಲ್ಲಿ ನಟಿ ಮೇಲೆ ಆತ್ಯಾಚಾರವೆಸಗಿದ ಆರೋಪ ಹಿನ್ನೆಲೆ ಪ್ರಕರಣ ದಾಖಲಾಗಿದ್ದ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿದ್ದ. 2022ರಲ್ಲಿ ಗುಜರಾತಿನ‌ ಆಶ್ರಮವೊಂದರಲ್ಲಿ ನಾಲ್ಕು ಮಕ್ಕಳನ್ನ ಅಪಹರಿಸಿದ ಆರೋಪದಡಿ ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 

ಬಂಧನ ಭೀತಿಯಿಂದ ದೇಶದಿಂದ ತಲೆಮರೆಸಿಕೊಂಡು ಈಕೆಡ್ವಾರ್ ಸಮೀಪದ ದ್ವೀಪವೊಂದನ್ನ ಯುನೈಟೆಡ್ ಸ್ಟೇಟ್  ಆಫ್ ಕೈಲಾಸ ದೇಶ ಎಂದು ಹೆಸರಿಟ್ಟುಕೊಂಡಿದ್ದ.

ಇದನ್ನೂ ಓದಿ-Gadag: ಆಂಬ್ಯುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News