ಬಳ್ಳಾರಿ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024 ನೇ  ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.


ಇದನ್ನೂ ಓದಿ: ಬಿಬಿಎಂಪಿ ವಲಯದಲ್ಲಿ ʼನಂಬಿಕೆ ನಕ್ಷೆʼ ಯೋಜನೆಗೆ ಚಾಲನೆ: ಡಿಸಿಎಂ ಡಿ.ಕೆ.ಶಿವಕುಮಾರ್


ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ.


ಸೆಪ್ಟೆಂಬರ್ 19 ರ  ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್: informationdiprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.