ಬೆಂಗಳೂರು :ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪ್ರತಿ ವರ್ಷದಂತೆ 2023 ನೇಯ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಕರಿಯಪ್ಪ.ಎನ್ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2023 ರ ಜನವರಿ 01 ರಿಂದ 2023 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2023 ಎಂದು ಮುದ್ರಿತವಾಗಿರಬೇಕು.


ಇದನ್ನೂ ಓದಿ- ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ


ವಿವಿಧ ಪ್ರಕಾರಗಳ ಪುಸ್ತಕಗಳು:


ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಕವನಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ), ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ ಬಹುಮಾನಗಳಿಗಾಗಿ), ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ, ಆತ್ಮಕಥೆ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್ ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ) ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ/ಅಂಕಣ ಬರಹ (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಬಿ.ವಿ. ವೀರಭದ್ರಪ್ಪ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-1 (ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ (ಸೃಜನ/ಸೃಜನೇತರ ಕೃತಿಗಳು) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಎಲ್.ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-2 (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಸೃಜನ /ಸೃಜನೇತರ ಕೃತಿ), ಲೇಖಕರ ಮೊದಲ ಸ್ವತಂತ್ರಕೃತಿ (2022ರಲ್ಲಿ ಮುದ್ರಣಗೊಂಡ ಮೊದಲ ಸ್ವತಂತ್ರಕೃತಿ. ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು) (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ), ಕನ್ನಡದಿಂದ ಇಂಗ್ಲಿಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ), ದಾಸ ಸಾಹಿತ್ಯ (ದಾಸ ಸಾಹಿತ್ಯ ಕುರಿತ ಸೃಜನ/ಸೃಜನೇತರ ಕೃತಿಗಳು) (ಶ್ರೀಮತಿ ಜಲಜಾ ಶ್ರೀಪತಿ ಆಚಾರ್ಯಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು).


ಇದನ್ನೂ ಓದಿ:ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ, ನದಿಪಾತ್ರದ ಜನರು ಎಚ್ಚರ ವಹಿಸುವಂತೆ  ಸೂಚನೆ


ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು:


ಮರುಮುದ್ರಣವಾದ ಪುಸ್ತಕಗಳು, ಪಿಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಮುಂದಿನ ಮೂರು ವರ್ಷದವರೆಗೆ ಪರಿಗಣಿಸುವುದಿಲ್ಲ, ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.


ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ 2024ರ ಆಗಸ್ಟ್ 31 ರೊಳಗೆ ತಲುಪಿಸಬೇಕು.


ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.