ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗಾಗಿ 30 ದಿನಗಳ ಫೋಟೋಗ್ರಾಪಿ ಮತ್ತು ವಿಡಿಯೋಗ್ರಾಫಿ ಟ್ರೈನಿಂಗ್ ಉಚಿತ ತರಬೇತಿಗಳನ್ನು ಜನವರಿ ತಿಂಗಳಲ್ಲಿ ಪ್ರಾರಂಭಿಸಲಾಗುವುದು.

Written by - Zee Kannada News Desk | Last Updated : Dec 17, 2021, 12:43 AM IST
  • ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗಾಗಿ 30 ದಿನಗಳ ಫೋಟೋಗ್ರಾಪಿ ಮತ್ತು ವಿಡಿಯೋಗ್ರಾಫಿ ಟ್ರೈನಿಂಗ್ ಉಚಿತ ತರಬೇತಿಗಳನ್ನು ಜನವರಿ ತಿಂಗಳಲ್ಲಿ ಪ್ರಾರಂಭಿಸಲಾಗುವುದು.
 ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗಾಗಿ 30 ದಿನಗಳ ಫೋಟೋಗ್ರಾಪಿ ಮತ್ತು ವಿಡಿಯೋಗ್ರಾಫಿ ಟ್ರೈನಿಂಗ್ ಉಚಿತ ತರಬೇತಿಗಳನ್ನು ಜನವರಿ ತಿಂಗಳಲ್ಲಿ ಪ್ರಾರಂಭಿಸಲಾಗುವುದು.

ಇದನ್ನೂ ಓದಿ: ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರದ ಐದು ಹೊಸ ಪ್ರಕರಣಗಳು ಪತ್ತೆ

ಅಭ್ಯರ್ಥಿಗಳು ಡಿ. 25 ರ ಒಳಗಾಗಿ ತಮ್ಮ ಹೆಸರು ವಿಳಾಸಗಳನ್ನು ನೊಂದಾಯಿಸಲು ಕೊನೆಯ ದಿನಾಂಕವಾಗಿರುತ್ತದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

ಇದನ್ನೂ ಓದಿ: ಭಾರತವು ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿನಿಧಿಸುತ್ತದೆ-ಪ್ರಧಾನಿ ಮೋದಿ

ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ದೂರವಾಣಿ ಸಂಖ್ಯೆ 9483485489, 9482188780, 9743321062, 08284-295307, 220807  ಸಂಪರ್ಕಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News