ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕøತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ.
ಬಳ್ಳಾರಿ: ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕøತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ-ಸೌಲಭ್ಯಕ್ಕಾಗಿ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ.
ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂ.24 ರೊಳಗಾಗಿ ಮಹಾನಗರ ಪಾಲಿಕೆ ವಲಯ ಕಚೇರಿ - 1ರ (ಹಳೇ ಕಟ್ಟಡದ) ಡೇ-ನಲ್ಮ್ ಶಾಖೆಗೆ ಸಲ್ಲಿಸಬೇಕು.
ಯೋಜನೆಗಳು:
ಸ್ವಯಂ ಉದ್ಯೋಗ ಕಾರ್ಯಕ್ರಮ(ವೈಯಕ್ತಿಕ):
ವೈಯಕ್ತಿಕ ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷದವರೆಗೆ ಸೇವಾ ವಲಯ ಬ್ಯಾಂಕ್‍ಗಳಿಂದ 100 ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು.
ಅರ್ಹತೆ:
ಅಭ್ಯರ್ಥಿ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರಾಗಿರಬೇಕು ಅಥವಾ ಅವರ ಮನೆಯಲ್ಲಿ ಯಾರಾದರೂ ಒಬ್ಬರು ಸಂಘದ ಸದಸ್ಯರಾಗಿರಬೇಕು. ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಾಗ 18 ವರ್ಷ ವಯಸ್ಸು ಪೂರೈಸಿರಬೇಕು.
ಸ್ವಯಂ ಉದ್ಯೋಗ ಕಾರ್ಯಕ್ರಮ(ಗುಂಪು):
ಎಸ್‍ಜೆಆರ್‍ಎಸ್‍ವೈ ಯೋಜನೆ ಹಾಗೂ ಡೇ-ನಲ್ಮ್ ಯೋಜನೆಯಡಿ ರಚಿತವಾದ 08 ಗುಂಪುಗಳು ಸ್ವಸಹಾಯ ಉದ್ದಿಮೆ/ಚಟುವಟಿಕೆಗಳನ್ನು ಪ್ರಾರಂಭಿಸಲು ರೂ.10 ಲಕ್ಷಗಳವರೆಗೆ ಸೇವಾ ವಲಯ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸಲಾಗುವುದು ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7 ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು.
ಅರ್ಹತೆ: ಗುಂಪಿನ ಎಲ್ಲಾ ಸದಸ್ಯರ ವಯಸ್ಸು 18 ವರ್ಷ ಪೂರೈಸಿರಬೇಕು. ಗುಂಪು ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಸಂಘ ಅಥವಾ ಕನಿಷ್ಟ 5 ಜನ ಸದಸ್ಯರ ಜೆ.ಎಲ್.ಜಿ ಗುಂಪು ಇರಬೇಕು ಹಾಗೂ ಸದರಿ ಸದಸ್ಯರು ಶೇ.70 ರಷ್ಟು ಬಡ ಕುಟುಂಬದವರಾಗಿರಬೇಕು.
ಸ್ವಸಹಾಯ ಸಂಘಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್:
ಎಸ್‍ಜೆಆರ್‍ಎಸ್‍ವೈ ಯೋಜನೆ ಹಾಗೂ ಡೇ-ನಲ್ಮ್ ಯೋಜನೆಯಡಿ ರಚಿತವಾದ 126 ಗುಂಪುಗಳು ಖಾತೆ ಹೊಂದಿರುವ ಬ್ಯಾಂಕ್‍ಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವುದು. (ಬ್ಯಾಂಕ್ ಲಿಂಕೇಜ್).
ಅರ್ಹತೆ: ಸ್ವಸಹಾಯ ಗುಂಪುಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಆವರ್ತಕ ನಿಧಿ ಪಡೆದಿರಬೇಕು.
ಸ್ವಸಹಾಯ ಗುಂಪುಗಳ ರಚನೆ ಕಾರ್ಯಕ್ರಮ:
ಬಳ್ಳಾರಿ ವ್ಯಾಪ್ತಿಯಲ್ಲಿ 10 ರಿಂದ 20 ಬಡ ಮಹಿಳೆಯರನ್ನೊಳಗೊಂಡ ಒಟ್ಟು 251 ಸ್ವ-ಸಹಾಯ ಗುಂಪುಗಳನ್ನು ರಚಿಸುವುದು.
ಅರ್ಹತೆ:
ಸದಸ್ಯತ್ವ ಬಯಸುವ ಎಲ್ಲರೂ 18ರಿಂದ 50 ವರ್ಷದೊಳಗಿರಬೇಕು. ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಸದಸ್ಯತ್ವ ಬಯಸುವವರು ಕಡ್ಡಾಯವಾಗಿ ಬಡತನ ರೇಖೆಗಿಂತ ಕೆಳಗಿರಬೇಕು (ಶೇ.70ರಷ್ಟು ಬಿಪಿಎಲ್ ಕುಟುಂಬದವರಾಗಿರಬೇಕು).
ಲಗತ್ತಿಸಬೇಕಾದ ದಾಖಲಾತಿಗಳು:
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್‍ಕಾರ್ಡ್, ಮತದಾರರ ಗುರುತಿನ ಚೀಟಿ, ಇತ್ತೀಚಿನ ಮೂರು ಭಾವ ಚಿತ್ರಗಳು, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬೇಕು.
ಸೂಚನೆ:
ಮೇಲ್ಕಂಡ ಯೋಜನೆಯ ಮಾರ್ಗಸೂಚಿಯ ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ನಿಗದಿತ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಅರ್ಜಿಗಳನ್ನು ತಿರಸ್ಕøತಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆ ವಲಯ ಕಚೇರಿ - 1ರ (ಹಳೇ ಕಟ್ಟಡದ) ಡೇ-ನಲ್ಮ್ ಶಾಖೆ ಅಥವಾ ದೂ.08392-273479, 278168 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.