ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಆಹ್ವಾನ..!

ಬೆಳಗಾವಿಯಲ್ಲಿ 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಘೋಷಿಸಿದ್ದರು

Written by - Manjunath N | Last Updated : Oct 24, 2024, 06:16 PM IST
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಘೋಷಿಸಿದ್ದರು.
  • ಮುಖ್ಯಮಂತ್ರಿಗಳೇ ಬರಾಕ್ ಒಬಾಮ ಅವರಿಗೆ ಪತ್ರ ಬರೆದು ಬರುವಂತೆ ಮನವಿ ಮಾಡಲಿದ್ದಾರೆ.
  • ಒಂದು ವರ್ಷದ ವಸ್ತು ಪ್ರದರ್ಶನ, ಸ್ಮಾರಕ ಸ್ತಂಭ ಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ.
 ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಆಹ್ವಾನ..! title=

ಬೆಂಗಳೂರು: 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಲು ಚರ್ಚೆ ನಡೆಯುತ್ತಿದೆ ಎಂದು ರಾಜ್ಯ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿ ಡಿ.ಕೆ.ಸುರೇಶ್

ಬೆಳಗಾವಿಯಲ್ಲಿ 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಘೋಷಿಸಿದ್ದರು.ಮುಖ್ಯಮಂತ್ರಿಗಳೇ ಬರಾಕ್ ಒಬಾಮ ಅವರಿಗೆ ಪತ್ರ ಬರೆದು ಬರುವಂತೆ ಮನವಿ ಮಾಡಲಿದ್ದಾರೆ ಎಂದು ಬುಧವಾರ ನಡೆದ ಶತಮಾನೋತ್ಸವ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಎಚ್.ಕೆ.ಪಾಟೀಲ್ ತಿಳಿಸಿದರು. 

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯದ್ದೇ ಗೆಲುವು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

ಇನ್ನೂ ಮುಂದುವರೆದು ಮಾತನಾಡಿದ ಅವರು ಛಾಯಾಚಿತ್ರ ಪ್ರದರ್ಶನ, ಒಂದು ವರ್ಷದ ವಸ್ತು ಪ್ರದರ್ಶನ, ಸ್ಮಾರಕ ಸ್ತಂಭ ಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ ಎಂದು ತಿಳಿಸಿದರು.ಅರ್ಥಪೂರ್ಣ ಮತ್ತು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಗಾಂಧಿ ವಿಚಾರಗಳ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News