JOB Updates: ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ
ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಕೊಪ್ಪಳ ನಗರಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ,ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ. ಅರ್ಜಿ ಸಲ್ಲಿಸಲು ಏ.20 ಕೊನೆಯ ದಿನವಾಗಿದ್ದು, ನಗರಸಭೆ ಕಾರ್ಯಾಲಯದಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಕಾರ್ಯಾಲಯಕ್ಕೆ ಸಲ್ಲಿಸಬೇಕು.ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.8000/- ಗೌರವಧನ ಹಾಗೂ ರೂ.2000/- ಟಿಎ ನೀಡಲಾಗುವುದು.
ಇದನ್ನು ಓದಿ: Raj Thackeray: ಥಾಣೆ ರ್‍ಯಾಲಿಯಲ್ಲಿ ಕತ್ತಿ ಹಿಡಿದಿದ್ದ ರಾಜ್ ಠಾಕ್ರೆ ಸೇರಿ ಮೂವರ ವಿರುದ್ಧ ಪ್ರಕರಣ
ಈ ಹುದ್ದೆಗೆ ಇರುವ ಅರ್ಹತೆಗಳು:
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ರಿಂದ 45 ವರ್ಷದ ವಯೋಮಿತಿ ಹೊಂದಿರಬೇಕು.
ಕನಿಷ್ಠ ಪಿಯುಸಿ ಅಥವಾ ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು.
ಕಂಪ್ಯೂಟರ್ ನಿರ್ವಹಣೆ ಜ್ಞಾನ (ಪ್ರಮಾಣ ಪತ್ರ) ಹೊಂದಿರಬೇಕು.
ಪಟ್ಟಣ ವ್ಯಾಪ್ತಿಯ ಸ್ವ-ಸಹಾಯ ಸಂಘದಲ್ಲಿ ಕನಿಷ್ಠ 3 ವರ್ಷದಿಂದ ಸದಸ್ಯೆಯಾಗಿರಬೇಕು.
ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯೆಯಾಗಿರಬೇಕು.
ಸ್ವ ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿ ಮಾಡಿರಬೇಕು.
ಕಟ್ ಬಾಕಿದಾರರಾಗಿರಬಾರದು.
ಸರ್ಕಾರಿ, ಅರೆಸರ್ಕಾರಿ, ಎನ್‌ಜಿಓ ಗಳಲ್ಲಿ ಉದ್ಯೋಗ ಹೊಂದಿರಬಾರದು.
ಕರ್ತವ್ಯ ನಿಮಿತ್ಯ ಅಗತ್ಯವಿದ್ದಲ್ಲಿ ಹೊರಸಂಚಾರಕ್ಕೆ ಸಿದ್ದವಿರಬೇಕು.
ಇದನ್ನು ಓದಿ: Fire in Lab: ಆಂಧ್ರಪ್ರದೇಶದ ಕೆಮಿಕಲ್ ಲ್ಯಾಬ್‌ನಲ್ಲಿ ಅಗ್ನಿ ಅವಘಡ, 6 ಮಂದಿ ಸಾವು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.