ಧಾರವಾಡ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ಮೋಟಾರ್‍ವಾಹನ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಸಾಧನೆ ಸಲಕರಣೆಗಳ ಯೋಜನೆಗೆ ಧಾರವಾಡ ಜಿಲ್ಲಾ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಸೇವಾ ಸಿಂಧು https://sevasindhu. karnataka. gov.in/Sevasindhu/Kannada ಆ್ಯಪ್ ಮೂಲಕ ಆನ್‍ಲೈನ್‍ನಲ್ಲಿ ಜನವರಿ 30, 2024 ರೊಳಗಾಗಿ ಆಸಕ್ತರು ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸಿದ ನಂತರ ಸೂಕ್ತ ದಾಖಲಾತಿಗಳನ್ನು ಆಯಾ ತಾಲೂಕಿನ ತಾಲೂಕಾ ಪಂಚಾಯತದಲ್ಲಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಲ್ಲಿ (ಎಂ.ಆರ್.ಡಬ್ಲ್ಯೂ) ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಾ ಪಂಚಾಯತ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.