ರೋಹಿಣಿ ಸಿಂಧೂರಿ, ಡಿ. ರೂಪಾ ವರ್ಗಾವಣೆ ಮಾಡಿ ಸರ್ಕಾರ ಆದೇಶ..!

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಬ್ಬರು ಅಧಿಕಾರಿಗಳ ಜಗಳ ತಾರಕಕ್ಕೇರಿದ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನಿನ್ನೆ ಮುಖ್ಯ ಕಾರ್ಯದರ್ಶಿಯವರು ಇಬ್ಬರು ಅಧಿಕಾರಿಗಳನ್ನು ಕರೆದು ಶಿಸ್ತು ಕಾಪಾಡಿಕೊಳ್ಳುವಂತೆ ತಿಳಿಸಿದ್ದರು. ಇದರ ಬೆನ್ನಲ್ಲೆ ಇಂದು ವರ್ಗಾವಣೆ ಮಾಡಲಾಗಿದೆ.

Written by - Krishna N K | Last Updated : Feb 21, 2023, 04:11 PM IST
  • ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ.
  • ಇಬ್ಬರು ಅಧಿಕಾರಿಗಳ ಜಗಳ ತಾರಕಕ್ಕೇರಿದ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
  • ನಿನ್ನೆ ಮುಖ್ಯ ಕಾರ್ಯದರ್ಶಿಯವರು ಇಬ್ಬರು ಅಧಿಕಾರಿಗಳನ್ನು ಕರೆದು ಶಿಸ್ತು ಕಾಪಾಡಿಕೊಳ್ಳುವಂತೆ ತಿಳಿಸಿದ್ದರು.
ರೋಹಿಣಿ ಸಿಂಧೂರಿ, ಡಿ. ರೂಪಾ ವರ್ಗಾವಣೆ ಮಾಡಿ ಸರ್ಕಾರ ಆದೇಶ..! title=

Rohini Sindhoori, D Roopa : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಬ್ಬರು ಅಧಿಕಾರಿಗಳ ಜಗಳ ತಾರಕಕ್ಕೇರಿದ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನಿನ್ನೆ ಮುಖ್ಯ ಕಾರ್ಯದರ್ಶಿಯವರು ಇಬ್ಬರು ಅಧಿಕಾರಿಗಳನ್ನು ಕರೆದು ಶಿಸ್ತು ಕಾಪಾಡಿಕೊಳ್ಳುವಂತೆ ತಿಳಿಸಿದ್ದರು. ಇದರ ಬೆನ್ನಲ್ಲೆ ಇಂದು ವರ್ಗಾವಣೆ ಮಾಡಲಾಗಿದೆ.

ಕಳೆದ ಎರಡು ಮೂರು ದಿನಗಳಿಂದ ಡಿ ರೂಪ ಮತ್ತು ರೋಹಿಣಿ ಅವರ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ವಾರ್‌ ನಡೆದಿತ್ತು. ರೂಪಾ ಅವರು ರೋಹಿಣಿ ಅವರ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ಅಲ್ಲದೆ, ಆರೋಪಗಳ ಮಳೆ ಸುರಿಸಿದ್ದರು. ರೋಹಿಣಿ ಸಹ ರೂಪಾ ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎನ್ನುವ ಮೂಲ ಟಾಂಗ್‌ ನೀಡಿದ್ದರು. ಇಬ್ಬರ ಜಗಳ ವಿಧಾನಸಭೆವರೆಗೂ ಹೋದ ಹಿನ್ನೆಲೆ ಸರ್ಕಾರ ಮುಜುಗರಕ್ಕೆ ಒಳಗಾಗಿತ್ತು.

No description available.

ಇದನ್ನೂ ಓದಿ: Siddaramaiah : ಧಮ್ಮಿದ್ರೆ, ತಾಕತ್ತಿದ್ದರೆ ನನ್ನನ್ನು ಮುಗಿಸಿ : ಗೃಹ ಸಚಿವರಿಗೆ ಸಿದ್ದು ಸವಾಲು!

ಇದೀಗ ಐಎಎಸ್‌ ಐಪಿಎಸ್‌ ಅಧಿಕಾರಿಗಳ ಜಗಳಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದ್ರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್​ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಮೌದ್ಗಿಲ್‌ ಅವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News