ಬೆಂಗಳೂರು: ತಮ್ಮ ವಿರುದ್ಧದ ಭ್ರಷ್ಟಾಚಾರ(Illegal Property & Corruption Allegation) ಆರೋಪಕ್ಕೆ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ (Ravi D Channanavar) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲಿನ ಭ್ರಷ್ಟಾಚಾರ ಆರೋಪಗಳೆಲ್ಲವೂ ಸುಳ್ಳು, ನಾನು ಕಾನೂನು ಬದ್ಧವಾಗಿಯೇ ಎಲ್ಲಾ ಆಸ್ತಿಯನ್ನು ಖರೀಸಿದ್ದೇನೆಂದು ಅವರು ಸ್ಪಷ್ಟನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಸೋಮವಾರ ಈ ಬಗ್ಗೆ ಲಿಖಿತ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು. ಸಾಮಾಜಿಕ ಜಾಲತಾಣದಲ್ಲಿ (Social Media)ನನ್ನ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ನನ್ನ ಎಲ್ಲಾ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ. ಈಗಾಗಲೇ ಈ ಬಗ್ಗೆ ಆದಾಯ ತೆರಿಗೆ ಇಲಾಖೆಗೂ (Income Tax Department) ಮಾಹಿತಿ ನೀಡಿದ್ದೇನೆಂದು ತಿಳಿಸಿದ್ದಾರೆ.


ಇದನ್ನೂ ಓದಿ: ಕೇಂದ್ರದ ಅಕ್ಕಿ ಪುಕ್ಕಟೆಯಾಗಿ ಕೊಟ್ಟು ಜಾಹೀರಾತು ನೀಡಿದ್ದ ಸಿದ್ದರಾಮಯ್ಯ: ಬಿಜೆಪಿ


ರವಿ ಡಿ ಚನ್ನಣ್ಣವರ್ ಹೇಳಿಕೆ ಹೀಗಿದೆ ನೋಡಿ


Income Tax Department) ಗೆ ಮಾಹಿತಿ ನೀಡಿರುತ್ತಾರೆ.


ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗುತ್ತಿದೆ. ನಾನೊಬ್ಬ ಅಖಿಲ ಭಾರತೀಯ ಸೇವಕ(Civil servants)ನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ. ಆದ್ದರಿಂದ ಈ ಕುರಿತು ನಾನು ಇದಾವುದಕ್ಕೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೆನೆ.


1. ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ


2. ನಾನು ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ 3 ಕೋಟಿ ರೂ.ಗೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಿದ್ದೇನೆ


3. ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ 2 ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ DEFEMATION ಕೇಸ್ ಹೂಡಲಿದ್ದೇನೆ.


ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.


ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.


ಇದನ್ನೂ ಓದಿ: ಎರಡೇ ದಿನದಲ್ಲಿ ವಿಧವೆಗೆ ಸರ್ಕಾರಿ ನೌಕರಿ ನೀಡಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ...!


ಹಾಗೆಯೇ ನನಗೆ  ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ. ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು. ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು. ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ಅಂತಾ ರವಿ ಡಿ ಚನ್ನಣವರ್(Ravi D Channanavar) ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.