ಹಾವೇರಿ : ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಯೋಜನೆ ರೂಪಿಸಿ, ನೀರಾವರಿಗೆ ಆದ್ಯತೆ ನೀಡಿ ರೈತರು ಬೆಳೆದಿರುವ ಬೆಳಗಳಿಗೆ ಬೆಂಬಲ ಬೆಲೆ ಒದಗಿಸಲಾಗುದು ಎಂದು‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ಭರವಸೆ ನೀಡಿದರು.


COMMERCIAL BREAK
SCROLL TO CONTINUE READING

ಇಂದು‌ ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡರುವ ಅವರು ನಗರದ ಕೋಳ್ಳಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿನ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.


ಸರ್ಕಾರ ನೂರು ದಿನ ಪೂರೈಸಿದೆ. ಎರಡು ತಿಂಗಳ ಕಾಲ ನೆರೆ ಪರಿಹಾರದ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ರೈತರಿಗೆ ನಾಲ್ಕು ಸಾವಿರ ಹಣ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಈಗಾಗಲೇ‌ ಎರೆಡು ಸಾವಿರ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ. ಪ್ರಧಾನ ಮಂತ್ರಿಯವರು ಆರು ಸಾವಿರ ಹಣ ಘೋಷಿಸಿದ್ದಾರೆ. ಒಟ್ಟು ಹತ್ತು ಸಾವಿರ ಹಣ ನೀಡಲಾಗುತ್ತಿದೆ. ದೇಶದಲ್ಲೇ ಯಾವ ರಾಜ್ಯದಲ್ಲಿ ನೀಡದಷ್ಟು ಪರಿಹಾರ ರೈತರಿಗೆ ನೀಡಿಲಾಗಿದೆ.‌ ರಾಜ್ಯದಲ್ಲಿ ರೈತಪರ ಸರ್ಕಾರವಿದ್ದು ಜನರು ಚಿಂತಿಸಬೇಕಾಗಿಲ್ಲ ಎಂದು ಅವರು ಆಶ್ವಾಸನೆ ನೀಡಿದರು. 


ಅತಿವೃಷ್ಠಿಯಿಂದ ಹಾನಿಗೋಳಗಾದ ಹಾವೇರಿ ಜಿಲ್ಲೆಯ ಪರಿಹಾರ ಕಾರ್ಯಗಳು ಹಾಗೂ ಅಭಿವೃದ್ಧಿ ಬಗ್ಗೆ‌ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಲಾಗುವುದು‌ ಎಂದು‌ ಸಿಎಂ ತಿಳಿಸಿದರು.


ಈ‌ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಮಂತ್ರಿ ಹಾಗೂ ಹಾನಗಲ್ ಶಾಸಕ ಸಿ.ಎಂ.ಉದಾಸಿ, ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಜಿಲ್ಲಾಧಿಕಾರಿ ಕೃಷ್ಞಾ ಬಾಜಪೇಯ, ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ ದೇವರಾಜ, ಸೇರಿದಂತೆ ಮತ್ತಿತ್ತರರು ಉಪಸ್ಥಿತಿರಿದ್ದರು.


ಇದಕ್ಕೂ ಮೊದಲು ಬೆಂಗಳೂರಿನಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಾಳಿತದ ವತಿಯಿಂದ ಗೌರವ ರಕ್ಷೆ ನೀಡಲಾಯಿತು.