ಜೆಡಿಎಸ್ ನತ್ತ ಸಿಎಂ ಇಬ್ರಾಹಿಂ ಚಿತ್ತ..!

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು.

Written by - Zee Kannada News Desk | Last Updated : Jan 28, 2022, 08:29 PM IST
  • ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು.
ಜೆಡಿಎಸ್ ನತ್ತ ಸಿಎಂ ಇಬ್ರಾಹಿಂ ಚಿತ್ತ..!  title=

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು.

ತಮ್ಮ ಸ್ವಕ್ಷೇತ್ರಕ್ಕೆ ಇಂದು ಬೆಳಗ್ಗೆಯಿಂದಲೇ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿಗಳು, ಸಂಜೆ ಹೊತ್ತಿಗೆ ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿದರು.ಈ ಭೇಟಿಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ಡಿಕೆ ಮಾಧ್ಯಮಗಳ ಜತೆ ಮಾತನಾಡಿ ಹೇಳಿದ್ದಿಷ್ಟು;

ಇದನ್ನೂ ಓದಿ: Shocking Video : ಅನ್ನವಿಡಲು ಬಂದವನ ಮೇಲೆಯೇ ದಾಳಿ ಮಾಡಿದ ಮಹಾ ಮೊಸಳೆ

"ಇಬ್ರಾಹಿಂ ಇನ್ನೂ ತೀರ್ಮಾನ ತೆಗೆದುಕೊಳ್ಳಬೇಕಿದೆ. ಏನೂ ಒತ್ತಡ ಹಾಕಿ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ. ಹಿಂದಿನ ಕೆಲವು ಘಟನೆಗಳನ್ನು ಇಬ್ರಾಹಿಂ ಮೆಲುಕು ಹಾಕಿದ್ದಾರೆ.ನೋವಿನಿಂದ ಹಿಂದಿನ ಘಟನೆಗಳನ್ನು ಇಬ್ರಾಹಿಂ ಹೇಳಿಕೊಂಡಿದ್ದಾರೆ.ದೇವೇಗೌಡರಿಗೂ ಇಬ್ರಾಹಿಂ ಅವರಿಗೂ ಇರುವ ನಂಟು ಸಿದ್ದರಾಮಯ್ಯ ರಾಜಕೀಯಕ್ಕೆ ಬರುವ ಮುಂದಿನಿಂದಲೂ ಇದೆ.1972 ಗೌಡರ ಜೊತೆ ಇಬ್ರಾಹಿಂ ಸಂಬಂಧ ಇದೆ.ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನ ಜನ ತಿರಸ್ಕಾರ ಮಾಡಲಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು ಯಾವಾಗ ತೀರ್ಮಾನ ಮಾಡಿದ್ರೂ ತುಂಬು ಹೃದಯದ ಸ್ವಾಗತ" ಎಂದು ಹೇಳಿದರು.

ಇದನ್ನೂ ಓದಿ: One Cut Two Cut Trailer Out Now : ಡ್ಯಾನಿಶ್ ಸೇಟ್ ಅಭಿನಯದ ಕನ್ನಡ ಕಾಮಿಡಿ-ಸಾಹಸ

"ಸೂಕ್ತ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳಲು ಸೂಕ್ತ ಸಮಯ ಹತ್ತಿರದಲ್ಲಿದೆ.ಸಿದ್ದರಾಮಯ್ಯ ಹೋರಾಟ ಮಾಡಿ, ಇಬ್ರಾಹಿಂಗೆ ರಾಜ್ಯ ಸಮಸ್ಥಾನ ಕೊಡಿಸಬಹುದಿತ್ತು. ಆದರೆ ಸಿದ್ದರಾಮಯ್ಯ ತಾವು ಬೆಳೆದರೆ ಹೊರತು ನಂಬಿಸಿ ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡು ಹೋದವರನ್ನು ಬೆಳೆಸಲಿಲ್ಲ.ಇದು ಎಲ್ಲರಿಗೂ ಗೊತ್ತಿರುವ ಸಂಗತಿ.ಉಳಿದಂತೆ ಮಾಜಿ ಸಚಿವ ಪುಟ್ಟರಾಜು ಹಾಗೂ ಸಿದ್ಧರಾಮಯ್ಯ ಭೇಟಿಗೆ ವಿಶೇಷ ಬೆಳವಣಿಗೆ ಏನಿಲ್ಲ ಅದಕ್ಕೆ ಬೇರೆ ಅರ್ಥ ಕಲಿಸುವುದು ಬೇಡ" ಎಂದು ತಿಳಿಸಿದರು.

ಇದನ್ನೂ ಓದಿ: ನೀವು ಕೂಡ ತಡರಾತ್ರಿ ಆಹಾರ ಸೇವಿಸುತ್ತೀರಾ? ಮಾರಣಾಂತಿಕ ಕಾಯಿಲೆಗೆ ಕಾರಣವಾದೀತು ಎಚ್ಚರ!

2023ಕ್ಕೆ ಜೆಡಿಎಸ್ ಸರಕಾರ ಬರುತ್ತದೆ ಎಂದು ಇಬ್ರಾಹಿಂ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ನಮ್ಮ ಪಕ್ಷ ತಪ್ಪದೇ ಅಧಿಕಾರಕ್ಕೆ ಬರುತ್ತದೆ' ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News