ಬೆಂಗಳೂರು: ಬ್ರಿಟನ್‌ನಿಂದ ರಾಜ್ಯಕ್ಕೆ ಮರಳಿದ್ದವರಲ್ಲಿ ಇದುವರೆಗೂ 11 ಜನರಿಗೆ ಬ್ರಿಟನ್ ರೂಪಾಂತರ ವೈರಸ್ ದೃಢಪಟ್ಟಿದೆ.  ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬ್ರಿಟನ್ ಕರೋನಾವೈರಸ್ ಕ್ಷಿಪ್ರಗತಿಯಲ್ಲಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಾಳೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. 


COMMERCIAL BREAK
SCROLL TO CONTINUE READING

ಈ ಸುದ್ದಿಗೋಷ್ಠಿಯಲ್ಲಿ ಸಿಎಂ  ಬಿ. ಎಸ್.  ಯಡಿಯೂರಪ್ಪ (BS Yediyurappa) ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸುವರೇ  ಅಥವಾ ಸೀಲ್ ಡೌನ್ ರೀತಿಯ ಕಠಿಣ ನಿಯಮಗಳನ್ನು ಜಾರಿಗೆ ತರಲಿದ್ದಾರೆಯೇ ಎಂಬ ಬಗ್ಗೆ ಕುತೂಹಲ ಹೆಚ್ಚಾಗಿದೆ.


ರಾಜ್ಯದಲ್ಲಿ ರೂಪಾಂತರಿ ಕರೋನಾವೈರಸ್ ಶಾಕ್!
 ಇತ್ತೀಚಿಗೆ ಬ್ರಿಟನ್‌ನಲ್ಲಿ ಪತ್ತೆಯಾಗಿರುವ ರೂಪಾಂತರಿ ಕರೋನಾವೈರಸ್ ಭಾರತಕ್ಕೂ ಕಾಲಿಟ್ಟಿದೆ. ಮಾತ್ರವಲ್ಲ ಬ್ರಿಟನ್‌ನಿಂದ ರಾಜ್ಯಕ್ಕೆ ಮರಳಿದ್ದವರಲ್ಲಿ ಕೆಲವರಿಗೆ ಹೊಸ ತಳಿಯ ಕರೋನಾ ಸೋಂಕು ಇರುವುದು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 7 ಜನರಿಗೆ ಹಾಗೂ ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ 4 ಜನರಿಗೆ ಸೇರಿದಂತೆ ರಾಜ್ಯದಲ್ಲಿ ಇದುವರೆ ಒಟ್ಟು 11 ಜನರಲ್ಲಿ ಬ್ರಿಟನ್ ರೂಪಾಂತರಿ ವೈರಸ್ ಪತ್ತೆಯಾಗಿದ್ದು ರಾಜ್ಯದ ಜನತೆಯ ಆತಂಕ ಹೆಚ್ಚಿಸಿದೆ. 


ಇದನ್ನೂ ಓದಿ: Coronavirus : ಲಂಡನ್ ವೈರಸ್ ನಿಂದ ನಿಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಿ.. ರೂಪಾಂತರಿ ಕರೋನಾ ಮಕ್ಕಳಿಗೆ ಮಾರಕವೇ..?


ರೂಪಾಂತರಿ ಕೋವಿಡ್ 19 (Covid 19) ಪತ್ತೆಯಾದ ಪ್ರದೇಶದ ಸುತ್ತ ಮುತ್ತ ಹೈಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.


ಈ ಬೆಳವಣಿಗೆಗಳ ಮಧ್ಯೆ ಹೊಸ ವರ್ಷ 2021ರ ಸಂಭ್ರಮಾಚರಣೆ ಕೂಡ ಸರ್ಕಾರಕ್ಕೆ ತಲೆನೋವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳಿನ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಸಂಯಮದಿಂದ ವರ್ತಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡುವುದರ ಜೊತೆಗೆ ರೂಪಾಂತರಿ ಕರೋನಾವೈರಸ್ (Coronavirus) ನಿಯಂತ್ರಣಕ್ಕಾಗಿ ಕೆಲವು ಕಠಿಣ ನಿಯಮಗಳನ್ನು ಘೋಷಿಸಬಹುದು ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: New Coronavirus Strain: ರಾಜ್ಯದ ಜನತೆಗೆ 'ಖಡಕ್ ಎಚ್ಚರಿಕೆ' ನೀಡಿದ ಸಿಎಂ ಬಿಎಸ್ ವೈ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.