ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗದ ಕಾರ್ಯ ಚಟುವಟಿಕೆಗಳು ಗರಿಗೆದರಿರುವ ವಿಷಯ ಹೊಸತೇನಲ್ಲ, ಆದರೆ ಈಗ ಎಲ್ಲರ ಮುಂದಿರುವ ಪ್ರಶ್ನೆ ಎಂದರೆ ಯಾವ ನಾಯಕ ಯಾವ ಕ್ಷೇತ್ರದಲ್ಲಿ ನಿಲ್ಲುತ್ತಾರೆ ಎಂಬುದು. ಅಂತಹದ್ದೇ ಪ್ರಶ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆಯೂ ಕೇಳಿ ಬರುತ್ತಿದೆ. ಸಿದ್ದರಾಮಯ್ಯ ಚುನಾವಣೆ ವಿಷಯ ಪ್ರಾರಂಭವಾದಾಗಿನಿಂದಲೂ ಇದು ನನ್ನ ಕಡೆಯ ಚುನಾವಣೆ, ಚಾಮುಂಡೇಶ್ವರಿ ಕ್ಷೇತ್ರದಲ್ಲೇ ನಾನು ಸ್ಪರ್ಧಿಸುತ್ತೇನೆ ಎಂದು ಹೇಳುತ್ತಾ ಬಂದಿದ್ದಾರೆ. ಒಂದೆರಡು ದಿನಗಳ ಹಿಂದೆಯೂ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸೋದು, ಎಪ್ರಿಲ್ 23 ರಂದು ನಾಮಪತ್ರ ಸಲ್ಲಿಸುವುದಾಗಿ ಸ್ಪಷ್ಟ ಪಡಿಸಿದ್ದರು.
ಏತನ್ಮಧ್ಯೆ, ಗುರುವಾರ(ಏ.5) ಬೆಳಗಾವಿ ಕಾಂಗ್ರೆಸ್ ಉಸ್ತುವಾರಿಯಾಗಿರುವ ಮಾಣಿಕ್ಯಂ ಠಾಕೂರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ಆದರೆ ಬಾದಾಮಿ ಕ್ಷೇತ್ರದ ಜನತೆ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಎಲ್ಲರಲ್ಲೂ ಗೊಂದಲ ಸೃಷ್ಟಿಸಿದ್ದಾರೆ.
ಗುರು-ಶಿಷ್ಯರ ನಡುವೆ ರಾಜಕೀಯ ಸವಾಲ್
ಇನ್ನು ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರವೇ ನನ್ನ ಸ್ಪರ್ಧೆ ಎಂಬುದನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮುಂದುವರೆದು ಮಾತನಾಡಿದ ಅವರು, ಅಭಿಮಾನಿಗಳು ಬಾದಾಮಿಯಲ್ಲಿ ಬಂದು ಸ್ಪರ್ಧಿಸಿ ಅಂತ ಹೇಳ್ತಾರೆ, ನಾನು ಚಾಮುಂಡೇಶ್ವರಿಯಲ್ಲೇ ನಿಲ್ಲಬೇಕೆಂದು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಎಷ್ಟು ಬಾರಿ ಸ್ಪರ್ಧೆಸಿದ್ದೇನೆಂದು ಕುಮಾರಸ್ವಾಮಿಗೆ ಗೊತ್ತಿದೆಯೇ? ಸಿದ್ದರಾಮಯ್ಯ
ರಾಜ್ಯ ಪ್ರವಾಸದಲ್ಲಿದ್ದರೂ ಚಾಮುಂಡೇಶ್ವರಿ ಕ್ಷೇತ್ರ ಬಿಡದ ಸಿಎಂ, ಈ ಎಲ್ಲಾ ಬೆಳವಣಿಗೆಗಳ ನಡುವೆ ಗುರುವಾರ ಮಧ್ಯರಾತ್ರಿ ಮೈಸೂರಿಗೆ ಬಂದು ವಾಸ್ತವ್ಯ ಹೂಡಿರುವ ಸಿಎಂ, ಇಂದು ಬೆಳಿಗ್ಗೆ 10 ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸಿಕ್ತು ಒಕ್ಕಲಿಗರ ಬೆಂಬಲ
ಚಾಮುಂಡೇಶ್ವರಿ ಕ್ಷೇತ್ರ ಗೆಲ್ಲಲು ಸಿದ್ದು ರಣತಂತ್ರ
ಚಾಮುಂಡೇಶ್ವರಿ ಕ್ಷೇತ್ರ ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಸಿದ್ದರಾಮಯ್ಯ, ಇಂದು(ಏ.6) 11.30ಕ್ಕೆ ಮೈಸೂರಿನ ಖಾಸಗಿ ಕಲ್ಯಾಣಮಂಟಪವೊಂದರಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಒಕ್ಕಲಿಗ ಮುಖಂಡರ ಸಭೆ ಕರೆದಿರುವ ಸಿಎಂ ನಡೆ ತೀವ್ರ ಕುತೂಹಲ ಉಂಟುಮಾಡಿದೆ. ಈ ಸಭೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಹಿರಿಯ ಮುಖಂಡರಾದ ಸಿದ್ದೇಗೌಡ, ನರಸೇಗೌಡ, ಕೃಷ್ಣ ಮಾದೇಗೌಡ, ಮರಿಗೌಡ, ಮಂಜೇಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಒಕ್ಕಲಿಗ ಮತ ಬೇಟೆಯ ಬಗ್ಗೆ ಪ್ರಭಾವಿ ಮುಖಂಡರೊಂದಿಗೆ ಸಭೆ ನಡೆಸಲಿದ್ದು, ಸಮಾಜಕ್ಕೆ ಸಂದೇಶ ನೀಡಲಿದ್ದಾರೆ.