ಬೆಂಗಳೂರು: ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಶ್ರೀ ಸಿದ್ದರಾಮಯ್ಯ ,ಶ್ರೀ  ಡಿಕೆಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ.ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಸರಣಿ ಟ್ವೀಟ್ ಗಳ ಮೂಲಕ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ.ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ.ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಎಂದು ಅವರು ಪ್ರಶ್ನಿಸಿದ್ದಾರೆ.


ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ.ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಎಂದು ಆಗ್ರಹಿಸಿದರು.


ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದು ಅವರು ಹೇಳಿದರು.


ಅದು ಬಿಟ್ಟು 'ಕೆಲ ಸಚಿವರು, ಶಾಸಕ'ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ.ಅಂಥ ರಾಜಕಾರಣ ಉಪಯೋಗವೂ ಇಲ್ಲ.ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ.ಜಾರಿ ಮಾಡಿ, ಅದರ ಹೊರತಾಗಿ ಈ  ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದು ಅವರು ಮನವಿ ಮಾಡಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ