ಮತದಾರರ ಪಟ್ಟಿಯಲ್ಲಿ ನಿಮ್ಮಹೆಸರು ಇದೆಯೇ ? ಎಂದು ತಿಳಿದುಕೊಳ್ಳಲು ಹೀಗೆ ಮಾಡಿ..!
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಅಕ್ಟೋಬರ್ 28 ರಂದು ಜರುಗಲಿದ್ದು, ಈ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ತಿಳಿಯಲು ಕ್ಷೇತ್ರ ವ್ಯಾಪ್ತಿಯ ಆಯಾ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸಬೇಕಾಗಿದೆ.
ಬೆಂಗಳೂರು: ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಅಕ್ಟೋಬರ್ 28 ರಂದು ಜರುಗಲಿದ್ದು, ಈ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ತಿಳಿಯಲು ಕ್ಷೇತ್ರ ವ್ಯಾಪ್ತಿಯ ಆಯಾ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸಬೇಕಾಗಿದೆ.
ನೀವು ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ನೋಂದಣಿ ಅರ್ಜಿ ಸಲ್ಲಿಸಿದ್ದರೆ, ನಿಮ್ಮ ಹೆಸರು, ವಿಳಾಸ, ಮತ್ತಿತರ ಮಾಹಿತಿ ನೀಡಿ ಬಳಿಕ ನಿಮ್ಮ ಮತಗಟ್ಟೆಯ ಮಾಹಿತಿ ಪಡೆಯಬಹುದು.ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ ceokarnataka.kar.nic.in ಅಥವಾ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್‍ಸೈಟ್ dharwad.nic.in ಮೂಲಕವೂ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.