ಸಾಗರ್ ಖಂಡ್ರೆಗೆ ಅಭೂತ ಪೂರ್ವ ಗೆಲುವು : ಕಲ್ಯಾಣ ಕರ್ನಾಟಕ ಜನತೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆ
ಚುನಾವಣೆ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿರುವ ಈಶ್ವರ ಖಂಡ್ರೆ ರಾಜ್ಯದಿಂದ ಜಯ ಸಾಧಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ.
ಬೀದರ್ :ಕಲ್ಯಾಣ ಕರ್ನಾಟಕದ ಎಲ್ಲಾ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ,ಕಲ್ಯಾಣ ಕರ್ನಾಟಕದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಿಂದ ಜಯ ಸಾಧಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಂದೂಕಾಲು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ನೀಡಿದ ಎಲ್ಲಾ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಾಗರ್ ಖಂಡ್ರೆ ಅವರನ್ನು 18ನೇ ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸತ್ ಸದಸ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗುವಂತೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದ ಎಲ್ಲಾ ಮತದಾರರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಪರಿಶ್ರಮ, ಜನರ ಆಶೀರ್ವಾದದಿಂದ ಗೆದ್ದಿದ್ದೇವೆ: ಎಚ್‌ಡಿಕೆ
ಪ್ರಜಾಪ್ರಭುತ್ವದ ಮಹಾ ಹಬ್ಬ ಸಾರ್ವತ್ರಿಕ ಚುನಾವಣೆ ಯಶಸ್ವಿಯಾಗಿ ಪೂರ್ಣವಾಗಲು ಸಹಕರಿಸಿದ ರಾಜ್ಯದ ಎಲ್ಲ ಮತದಾರರಿಗೆ, ಚುನಾವಣಾ ಆಯೋಗಕ್ಕೆ, ಚುನಾವಣಾ ಕಾರ್ಯದಲ್ಲಿ ನಿರತರಾದ ಎಲ್ಲರಿಗೂ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸುವುದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಗೆಲುವಿನ ಕೇಕೆ : ಮೋದಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಕಾರ್ಯಕರ್ತರ ಸಂಭ್ರಮ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.