Ishwara Khandre : ದೇಶದ ಅಭಿವೃದ್ಧಿಗೆ ಲಿಂಗಾಯಿತ ವೀರಶೈವರ ಕೊಡುಗೆ ಅಪಾರ - ಈಶ್ವರ ಖಂಡ್ರೆ

Forest Department Mninister: ಈಶ್ವರ ಖಂಡ್ರೆ ಸಚಿವರಾದ ಬಳಿಕ ನಗರದ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಆ ವೇಳೆ  ವೀರಶೈವ ಲಿಂಗಾಯತರ ಬಗ್ಗೆ ಮಾತಾನಾಡಿದ್ದಾರೆ. 

Written by - Zee Kannada News Desk | Last Updated : Jun 6, 2023, 05:54 PM IST
  • ಅಭಿವೃದ್ಧಿಗೆ ಲಿಂಗಾಯಿತ ವೀರಶೈವರ ಕೊಡುಗೆ ಅಪಾರ ಎಂದು ಈಶ್ವರ ಖಂಡ್ರೆ ಅಭಿಪ್ರಾಯ
  • ಸಚಿವರಾದ ಬಳಿಕ ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಮೊದಲ ಬಾರಿಗೆ ಭೇಟಿ
  • ಮಹಾಸಭಾ ಕಾರ್ಯಕ್ರಮದಲ್ಲಿ ವೀರಶೈವ ಕೊಡುಗೆ ಬಗ್ಗೆ ಮಾತಾನಾಡಿದ ಸಚಿವ
Ishwara Khandre : ದೇಶದ ಅಭಿವೃದ್ಧಿಗೆ ಲಿಂಗಾಯಿತ ವೀರಶೈವರ ಕೊಡುಗೆ ಅಪಾರ - ಈಶ್ವರ ಖಂಡ್ರೆ title=

ಬೆಂಗಳೂರು: ಈಶ್ವರ ಖಂಡ್ರೆ ಸಚಿವರಾದ ಬಳಿಕ ನಗರದ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಮತ್ತು ಮಠಾಧೀಶರು ಯಾವುದೇ ಜಾತಿ, ಮತ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ಶಿಕ್ಷಣ ಅನ್ನ, ಜ್ಞಾನವನ್ನು ನೀಡಿದ್ದಾರೆಂದು ಅರಣ್ಯ ಜೀವಿ ಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಜಗತ್ತಿಗೆ ಸಾಮಾಜಿಕ ನ್ಯಾಯ ನೀಡಿದ್ದು ವೀರಶೈವ ಲಿಂಗಾಯಿತ ಸಮುದಾಯ. ಇಂತಹ ಸಮಾಜದಲ್ಲಿ ಇಂದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ತೀವ್ರ ಹಿಂದುಳಿದ ಅನೇಕ ಜನರಿದ್ದಾರೆ ಅವರಿಗೆ ಸೂಕ್ತ ಪ್ರಾತಿನಿಧ್ಯ ಮತ್ತು ಮೀಸಲಾತಿ ದೊರಕಬೇಕು ಇದಕ್ಕಾಗಿ ಮಹಾಸಭಾ ಶ್ರಮಿಸುತ್ತಿದೆ ಎಂದರು.

ಇದನ್ನೂ ಓದಿ: ತಮ್ಮನ ಮೇಲಿನ ಸೇಡು; ಹಂತಕರ ಕೈಯಲ್ಲಿ ಬಲಿಯಾಗಿದ್ದು ಮಾತ್ರ ಅಣ್ಣ !

ಕೇಂದ್ರ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತರಿಗೆ ಮೀಸಲು ಕಲ್ಪಿಸಬೇಕು ಎಂದು ಮಹಾಸಭಾ ಹಿಂದಿನಿಂದಲೂ ಆಗ್ರಹಿಸುತ್ತಿದೆ, ಇದಕ್ಕೆ ನಿರಂತರ ಪ್ರಯತ್ನ ಮಾಡಲಾಗುವುದು ಎಂದರು. ಸಮಾಜದ ಎಲ್ಲಾ ಒಳಪಂಗಡಗಳನ್ನು ಮತ್ತು ಸರ್ವರನ್ನೂ ಒಗ್ಗೂಡಿಸಿ ಸಮಾಜದಲ್ಲಿ ಒಟ್ಟಾಗಿ ತೆಗೆದುಕೊಂಡು ಹೋಗಲು ಪೂಜ್ಯರಾದ ಮ.ನಿ.ಪ್ರ. ಶ್ರೀ ಕುಮಾರ ಸ್ವಾಮಿ ಅವರು ಈ ಸಂಸ್ಥೆಯನ್ನ ಕಟ್ಟಿದ್ದಾರೆ ಅವರ ಆಶಯವನ್ನು ಸಭಾದ ಎಲ್ಲಾ ಅಧ್ಯಕ್ಷರು ಮುಂದುವರಿಸಿದ್ದಾರೆ.

ಹಾಲಿ ಅಧ್ಯಕ್ಷರಾಗಿರುವ ಶಾಮನೂರು ಶಿವಶಂಕರಪ್ಪ ಅವರು ಉತ್ತಮ ಕಾರ್ಯ ಮಾಡುತ್ತಿದ್ದಾರೆ, ಜೊತೆಗೆ ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದರು.
 ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಹಾಸ್ಟೆಲ್ ನಿರ್ಮಾಣ ಮಾಡುವಂತೆ  ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವಂತೆ ಸಮುದಾಯಕ್ಜೆ ಮನವಿ ಮಾಡಿದರು.

ಇದನ್ನೂ ಓದಿ: ಮಗಳ ಹುಟ್ಟು ಹಬ್ಬಕ್ಕೆ ಸರ್ಕಾರದ ಲೆಟರ್‌ ಹೆಡ್‌ನಲ್ಲೇ ಆಹ್ವಾನ ಹೊರಡಿಸಿದ ಕುಲಪತಿ..!

ಸಚಿವರಾದ ಬಳಿಕ ಪ್ರಥಮ ಬಾರಿಗೆ ಮಹಾಸಭಾ ಆಗಮಿಸಿದ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು ಮತ್ತು ಸಮುದಾಯದ ಜನರು ತೋರಿದ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ವೀರಶೈವ ಲಿಂಗಾಯತ ಮಠಗಳು ಧಾರ್ಮಿಕತೆ ಮತ್ತು ಆಧ್ಯಾತ್ಮಿಕತೆಯನ್ನು ಎತ್ತಿ ಹಿಡಿದು ನಮ್ಮ ಸಂಸ್ಕೃತಿಯನ್ನು ಉಳಿಸಿವೆ. ಸಂಸ್ಕೃತಿ ಸಮುದಾಯದ ಸೋಪಾನವಾಗಿದೆ ಎಂದರು.

 ಇಂದು ಸಮುದಾಯದ ಅನೇಕರು ಬಡತನ ರೇಖೆಗಿಂತ ಕೆಳಗಿದ್ದಾರೆ ಅವರನ್ನು ಮೇಲೆತ್ತುವ ಕಾರ್ಯ ಆಗಬೇಕು ಎಂದರು. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದರಿಂದಲೇ 35ಕ್ಕೂ ಹೆಚ್ಚು ಲಿಂಗಾಯತ ವೀರಶೈವ ಸಮಾಜದ ಶಾಸಕರು ಆಯ್ಕೆಯಾಗಿರುವುದು ಸಂತಸದ ಸಂಗತಿ ಎಂದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News