Aditya L-1: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋದಿಂದ ‘ಸೂರ್ಯ’ ಶಿಕಾರಿ!

Aditya-L1 Mission: ಸೆಪ್ಟೆಂಬರ್ ಮೊದಲ ವಾರದಲ್ಲಿ ಸೂರ್ಯನ ಅಧ್ಯನಕ್ಕೆ ‘Aditya L-1’ ಯೋಜನೆ ಕೈಗೊಳ್ಳಲಾಗುವುದು ಎಂದು ಕೆಲ ದಿನಗಳ ಹಿಂದಷ್ಟೇ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದರು.

Written by - Puttaraj K Alur | Last Updated : Aug 28, 2023, 05:21 PM IST
  • ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಸಾಹಸಕ್ಕೆ ಕೈಹಾಕಿದ ISRO
  • ಸೂರ್ಯನ ಅಧ್ಯಯನಕ್ಕಾಗಿ Aditya L-1ನ್ನು ಸೆಪ್ಟೆಂಬರ್ 2ರ ಬೆಳಗ್ಗೆ 11.50ಕ್ಕೆ ಉಡಾವಣೆ
  • ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ನಡೆಯಲಿದೆ
Aditya L-1: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋದಿಂದ ‘ಸೂರ್ಯ’ ಶಿಕಾರಿ! title=
ಸೂರ್ಯನ ಅಧ್ಯಯನಕ್ಕಾಗಿ Aditya L-1

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯು ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಸಾಹಸಕ್ಕೆ ಕೈಹಾಕಿದೆ. ಚಂದ್ರಯಾನ-3ರ ಯಶಸ್ಸಿನ ಬಳಿಕ ಮತ್ತೊಂದು ಐತಿಹಾಸಿಕ ದಾಖಲೆಗೆ ಇಸ್ರೋ ಮುಹೂರ್ತ ಫಿಕ್ಸ್ ಮಾಡಿದೆ. ಸೂರ್ಯನ ಶಿಕಾರಿಗಾಗಿ Aditya L-1 ಉಡಾವಣೆಗೆ ಸಮಯ ನಿಗದಿ ಮಾಡಲಾಗಿದೆ.

ಈ ಬಗ್ಗೆ ಟ್ವೀಟರ್‍ನಲ್ಲಿ ಮಾಹಿತಿ ನೀಡಿರುವ ಇಸ್ರೋ, ‘ಸೂರ್ಯನ ಅಧ್ಯಯನಕ್ಕಾಗಿ Aditya L-1ನ್ನು ಸೆಪ್ಟೆಂಬರ್ 2ರ ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ನಡೆಸಲಾಗುತ್ತದೆ’ ಎಂದು ತಿಳಿಸಿದೆ.

ಇದನ್ನೂ ಓದಿ: ರೈಲಿನ ಪೂರ್ತಿ ಕೋಚ್ ಅನ್ನು ಸುಲಭವಾಗಿ ಬುಕ್ ಮಾಡಲು ಈ ವೆಬ್ ಸೈಟ್ ಬಳಸಿ

ಇದೇ ವೇಳೆ ವೀಕ್ಷಕರಿಗೂ Aditya L-1ನ್ನು ಉಡಾವಣೆಯನ್ನು ವೀಕ್ಷಿಸಲು ಸಂಸ್ಥೆ ಅವಕಾಶ ನೀಡಿದ್ದು, ನೋಂದಣಿ ಮಾಡಿಕೊಂಡು ಶ್ರೀಹರಿಕೋಟಾಕ್ಕೆ ಬರುವಂತೆ ಆಹ್ವಾನ ನೀಡಿದೆ.   

ಇಸ್ರೋ ತನ್ನ ಮಹತ್ವಾಕಾಂಕ್ಷಿ ಚಂದ್ರಯಾನ-3ರ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಸೂರ್ಯನನ್ನು ಅಧ್ಯಯನ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಸೂರ್ಯನ ಅಧ್ಯನಕ್ಕೆ ‘Aditya L-1’ ಯೋಜನೆ ಕೈಗೊಳ್ಳಲಾಗುವುದು ಎಂದು ಕೆಲ ದಿನಗಳ ಹಿಂದಷ್ಟೇ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದರು.

ಇದನ್ನೂ ಓದಿ: ವೇತನ ನಿಯಮಗಳಲ್ಲಿ ಬದಲಾವಣೆ ! ಮುಂದಿನ ತಿಂಗಳಿನಿಂದಲೇ ಕೈ ಸೇರುವುದು ಹೆಚ್ಚಿನ ವೇತನ

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News