'ಕನ್ನಡ ಹೋರಾಟಗಾರರನ್ನು ಹತ್ತಿಕ್ಕಲು ಪೊಲೀಸರ‌ನ್ನು‌ ಬಳಸಿಕೊಳ್ಳುತ್ತಿರುವುದು ಅತ್ಯಂತ ನಾಚಿಗೆಗೇಡಿನ ವಿಷಯ'

ಕನ್ನಡ ಹೋರಾಟಗಾರರನ್ನು ಹತ್ತಿಕ್ಕಲು ಪೊಲೀಸರ‌ನ್ನು‌ ಬಳಸಿಕೊಳ್ಳಲಾಗುತ್ತಿದೆ. ಇದು ಅತ್ಯಂತ ನಾಚಿಗೆಗೇಡಿನ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ ನಾರಾಯಣಗೌಡರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Written by - Zee Kannada News Desk | Last Updated : Dec 22, 2021, 10:29 PM IST
  • ಕನ್ನಡ ಹೋರಾಟಗಾರರನ್ನು ಹತ್ತಿಕ್ಕಲು ಪೊಲೀಸರ‌ನ್ನು‌ ಬಳಸಿಕೊಳ್ಳಲಾಗುತ್ತಿದೆ. ಇದು ಅತ್ಯಂತ ನಾಚಿಗೆಗೇಡಿನ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ ನಾರಾಯಣಗೌಡರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
'ಕನ್ನಡ ಹೋರಾಟಗಾರರನ್ನು ಹತ್ತಿಕ್ಕಲು ಪೊಲೀಸರ‌ನ್ನು‌ ಬಳಸಿಕೊಳ್ಳುತ್ತಿರುವುದು ಅತ್ಯಂತ ನಾಚಿಗೆಗೇಡಿನ ವಿಷಯ' title=
Photo Courtesy: Twitter

ಬೆಂಗಳೂರು: ಕನ್ನಡ ಹೋರಾಟಗಾರರನ್ನು ಹತ್ತಿಕ್ಕಲು ಪೊಲೀಸರ‌ನ್ನು‌ ಬಳಸಿಕೊಳ್ಳಲಾಗುತ್ತಿದೆ. ಇದು ಅತ್ಯಂತ ನಾಚಿಗೆಗೇಡಿನ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ ನಾರಾಯಣಗೌಡರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ, ‘ಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ: ಎಚ್​ಡಿಕೆ

ಟಿ.ಎ ನಾರಾಯಣಗೌಡರು ಹೇಳಿದ್ದಿಷ್ಟು...

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ ಆರೋಪ ಮೇರೆಗೆ ಬಂಧಿತರಾಗಿರುವ ಹದಿಮೂರು ಮಂದಿ ಕನ್ನಡ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ಅತಿರೇಕದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಈ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಸೆಕ್ಷನ್ ಗಳನ್ನು ಹೂಡಲಾಗುತ್ತಿದೆ. ಇದು ಆಘಾತಕಾರಿಯಾಗಿದೆ.

ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ಕನ್ನಡಿಗರ ಅಸ್ಮಿತೆಯಾದ ಕನ್ನಡ ಬಾವುಟಗಳನ್ನು ಸುಡಲಾಯಿತು. ಸಂಗೊಳ್ಳಿ ರಾಯಣ್ಣ, ವಿಶ್ವಗುರು ಬಸವಣ್ಣನವರ ಪ್ರತಿಮೆ, ಭಾವಚಿತ್ರಗಳನ್ನು ವಿರೂಪಗೊಳಿಸಲಾಯಿತು. ಇದರಿಂದ ಪ್ರಚೋದನೆಗೆ ಒಳಗಾದ ಯುವಕರು ಆವೇಶದಿಂದ ಮಾಡಿದ ಕೃತ್ಯಕ್ಕೆ ರಾಜ್ಯ ಸರ್ಕಾರ ಇಷ್ಟು ಅತಿರೇಕದ ಕ್ರಮ ಕೈಗೊಳ್ಳುವ ಅಗತ್ಯವಿರಲಿಲ್ಲ.

ಇದನ್ನೂ ಓದಿ: Job and Career: ಈ ಜಿಲ್ಲೆಗಳ ರೈತರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸುವರ್ಣಾವಕಾಶ...!

ಕನ್ನಡ ಕಾರ್ಯಕರ್ತರು ಮಾಡಿದ್ದು ಸರಿಯಲ್ಲ. ಇದನ್ನು‌ ಕರ್ನಾಟಕ ರಕ್ಷಣಾ ವೇದಿಕೆ ಸಮರ್ಥಿಸುವುದಿಲ್ಲ. ಆದರೆ ಮೂವರು ಮಾಡಿದ ಕೃತ್ಯಕ್ಕೆ ಹದಿಮೂರು ಜನರನ್ನು ಬಂಧಿಸಲಾಗಿದೆ. ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ವಿಡಿಯೋ‌ ಶೇರ್ ಮಾಡಿದವರನ್ನು ಬಂಧಿಸಲಾಗಿದೆ. ಇದನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ.

ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಪೊಲೀಸರು ನಿನ್ನೆ ನ್ಯಾಯಾಂಗ ಬಂಧನದಲ್ಲಿದ್ದ ಕನ್ನಡ ಕಾರ್ಯಕರ್ತರನ್ನು ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಇದರ ಉದ್ದೇಶ ಸ್ಪಷ್ಟವಾಗಿದೆ. ಕನ್ನಡ ಹೋರಾಟಗಾರರನ್ನು ಹತ್ತಿಕ್ಕಲು ಪೊಲೀಸರ‌ನ್ನು‌ ಬಳಸಿಕೊಳ್ಳಲಾಗುತ್ತಿದೆ. ಇದು ಅತ್ಯಂತ ನಾಚಿಗೆಗೇಡಿನ ವಿಷಯ.

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು, ಕನ್ನಡಿಗರ‌ ಮೇಲೆ ಹಲ್ಲೆ ನಡೆಸಿ, ಕನ್ನಡಿಗರ ಆಸ್ತಪಾಸ್ತಿ ನಷ್ಟಗೊಳಿಸಿದವರ ಮೇಲೆ‌ ಅಲ್ಲಿನ ಶಿವಸೇನೆ ನೇತೃತ್ವದ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಪಿಗಳು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ಅಮಾಯಕ ಕನ್ನಡ ಕಾರ್ಯಕರ್ತರನ್ನು‌ ಹಿಂಸಿಸಲಾಗುತ್ತಿದೆ.

ಇದನ್ನೂ ಓದಿ: ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ

ಕನ್ನಡ ಯುವಕರು ಕನ್ನಡ ಚಳವಳಿಯಲ್ಲಿ ತೊಡಗದಂತೆ ಪಟ್ಟಭದ್ರ‌ಹಿತಾಸಕ್ತಿಗಳು ಕುತಂತ್ರ ನಡೆಸುತ್ತಿರುವ ಪರಿಣಾಮವಾಗಿ ಕನ್ನಡ ಕಾರ್ಯಕರ್ತರನ್ನು‌ ಗುರಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ‌ ಕೂಡಲೇ ಬಂಧಿತ‌ ಕನ್ನಡ ಕಾರ್ಯಕರ್ತರ ಮೇಲೆ ಹೂಡಲಾಗಿರುವ ಸುಳ್ಳು‌ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News