"ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!"

24 ಸಚಿವರ ನೂತನ ಸಚಿವ ಸಂಪುಟದ ಸದಸ್ಯರು ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಈಗ ಕಾಂಗ್ರೆಸ್ ಇದುವರೆಗೆ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವ ನಡೆಗೆ ವ್ಯಂಗ್ಯವಾಡಿದೆ.

Written by - Manjunath N | Last Updated : May 27, 2023, 04:49 PM IST
  • ಚುನಾವಣೆಗೆ ನಾವೂ ಭರವಸೆಗಳನ್ನು ಕೊಟ್ಟಿದ್ದೆವು. ಬಿಜೆಪಿಯೂ ಭರಪೂರ ಭರವಸೆಗಳನ್ನು ಕೊಟ್ಟಿತ್ತು
  • ಇಂದು ಬಿಜೆಪಿ ಜನತೆ ಕಾಂಗ್ರೆಸ್ಸಿನ ಭರವಸೆಗಳಿಗೆ ಮತ ಹಾಕಿದ್ದಾರೆ ಎನ್ನುತ್ತಿದೆ
  • ಬಿಜೆಪಿಯ ಭರವಸೆಗಳನ್ನು ಜನತೆ ನಂಬಿಲ್ಲ, ಸುಳ್ಳಿನ ಬಿಜೆಪಿ ಮೇಲೆ ಜನತೆಗೆ ಭರವಸೆ ಉಳಿದಿಲ್ಲ ಎನ್ನುವುದನ್ನು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದೆ!
"ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!" title=

ಬೆಂಗಳೂರು: 24 ಸಚಿವರ ನೂತನ ಸಚಿವ ಸಂಪುಟದ ಸದಸ್ಯರು ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಈಗ ಕಾಂಗ್ರೆಸ್ ಇದುವರೆಗೆ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವ ನಡೆಗೆ ವ್ಯಂಗ್ಯವಾಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ 'ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು, ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ! ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ! ಎಂದು ಅದು ಬಿಜೆಪಿಗೆ ಸವಾಲು ಹಾಕಿದೆ.

ಚುನಾವಣೆಗೆ ನಾವೂ ಭರವಸೆಗಳನ್ನು ಕೊಟ್ಟಿದ್ದೆವು. ಬಿಜೆಪಿಯೂ ಭರಪೂರ ಭರವಸೆಗಳನ್ನು ಕೊಟ್ಟಿತ್ತು.ಇಂದು ಬಿಜೆಪಿ ಜನತೆ ಕಾಂಗ್ರೆಸ್ಸಿನ ಭರವಸೆಗಳಿಗೆ ಮತ ಹಾಕಿದ್ದಾರೆ ಎನ್ನುತ್ತಿದೆ.ಬಿಜೆಪಿಯ ಭರವಸೆಗಳನ್ನು ಜನತೆ ನಂಬಿಲ್ಲ, ಸುಳ್ಳಿನ ಬಿಜೆಪಿ ಮೇಲೆ ಜನತೆಗೆ ಭರವಸೆ ಉಳಿದಿಲ್ಲ ಎನ್ನುವುದನ್ನು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದೆ! ಎಂದು ಬಿಜೆಪಿಯನ್ನು ಲೇವಡಿ ಮಾಡಿದೆ.

ನಾವು ನೀಡಿದ ಭರವಸೆಗಳನ್ನು ಈಡೇರಿಸುವುದು 'ಗ್ಯಾರಂಟಿ' ಆದರೆ ಬಿಜೆಪಿ ನಾಯಕರು ಚುನಾವಣೆಗೂ ಮೊದಲು ಉಚಿತ ಯೋಜನೆಗಳನ್ನ ನೀಡಬಾರದು, ಉಚಿತ ಕೊಟ್ಟರೆ ಶ್ರೀಲಂಕಾ ಆಗತ್ತೆ, ಪಾಕಿಸ್ತಾನ್ ಆಗತ್ತೆ ಎಂದು ವಿರೋಧಿಸಿದ್ದವರು ಇಂದು ಗ್ಯಾರಂಟಿ ಜಾರಿಗಾಗಿ ಪ್ರತಿಭಟಿಸುತ್ತೇವೆ ಎನ್ನುತ್ತಿರುವುದು ಹಾಸ್ಯಾಸ್ಪದ.ಬಿಜೆಪಿಗರಿಗೆ ಒಂದೇ ನಿಲುವು ಇಲ್ಲದಿರುವುದೇಕೆ? ಎಂದು ಅದು ಪ್ರಶ್ನಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

Trending News