ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯ
Lokshabha Elections 2024: ಪ್ರಧಾನಿ ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ RSS ಹೇಳುತ್ತಿದ್ದು, ಇವರಿಂದ ಸಂವಿಧಾನ ಉಳಿಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಹಾಗಾಗಿ ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಭಾನುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಭಾರತೀಯ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶ, ಸಮ ಸಮಾಜದ ಗ್ಯಾರಂಟಿ ನೀಡುತ್ತದೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ, ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ. ರಾಜ್ಯದ ಬಡಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು ಕೋರಿದಾಗ, ಅಕ್ಕಿ ದಾಸ್ತಾನಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ನೀಡಲು ಒಪ್ಪಲಿಲ್ಲ. ಆದ್ದರಿಂದ ನಮ್ಮ ಸರ್ಕಾರ ಅಕ್ಕಿ ಬದಲು ಕೆಜಿಗೆ 34 ರೂ. ನಂತೆ 5 ಕೆಜಿಗೆ 170 ರೂ.ನಂತೆ ಜುಲೈ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿರುವ SIT
ಪ್ರಜ್ವಲ್ ರೇವಣ್ಣ ಈವತ್ತಲ್ಲ ನಾಳೆ ವಿಚಾರಣೆಗೆ ಬರಲೇಬೇಕು
ಪ್ರಧಾನಿ ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ಪಾದಯಾತ್ರೆ ಹಾಗೂ ನ್ಯಾಯ ಯಾತ್ರೆ ಮಾಡಿದರು. ದೇಶ ವಿಭಜನೆ ಮಾಡಲು ಮೋದಿಯವರು ಮಾಡಿರುವ ಪ್ರಯತ್ನಗಳಿಂದ ಬೇಸತ್ತಿದ್ದ ಜನರ ಒಡೆದ ಮನಸ್ಸನ್ನು ಒಗ್ಗೂಡಿಸಲು ಯಾತ್ರೆ ಕೈಗೊಂಡು ಯಶಸ್ವಿಯಾದರು ಎಂದು ಹೇಳಿದ್ದಾರೆ.
ರಾಜ್ಯದ ಜನರಿಗೆ ಪ್ರಧಾನಿ ಮೋದಿಯವರ ಆಡಳಿತ ಬದಲಿಸಲು ಅವಕಾಶ ಸಿಕ್ಕಿದೆ. ಕರ್ನಾಟಕಕ್ಕೆ ಮೋದಿಯವರು ಕೇವಲ ಚೊಂಬು ನೀಡಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ತಮ್ಮ ಮತಗಳ ಮೂಲಕ ಛಾಟಿ ಬೀಸುತ್ತಾರೆ. ಈ ಬಾರಿ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಿಂದ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕಪಾಠ ಕಲಿಸಬೇಕು ಎಂದು ರಾಜ್ಯದ ಜನರಿಗೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.