ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಮೇಲಿನ ಸೆಸ್ ಅನ್ನು 2 ರೂ.ಗಳಷ್ಟು ಇಳಿಕೆ ಮಾಡಲಾಗಿದೆ. ಹಾಗಾಗಿ ಮತ್ತೆ ವ್ಯಾಟ್ ಕಡಿತ ಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಗುರುವಾರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ತೈಲ ಕಂಪನಿಗಳಿಂದ ಒಂದು ರೂಪಾಯಿ ಕಡಿತ ಹಾಗೂ ಕೇಂದ್ರ ಅಬಕಾರಿ ಸುಂಕ 1.50 ರೂ. ಕಡಿತ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.


ಪೆಟ್ರೋಲ್, ಡೀಸೆಲ್​ ಬೆಲೆ ರೂ. 2.50 ಇಳಿಸಿದ ಕೇಂದ್ರ; ಈ ಕ್ಷಣದಿಂದಲೇ ಪರಿಷ್ಕೃತ ದರ ಜಾರಿ


ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ದೇಶದ ಜನರ ಮೇಲಾದ ಹೊರೆಯನ್ನು ಮನಗಂಡು ಈಗಲಾದರೂ ಅಬಕಾರಿ ಸುಂಕ ಕಡಿಮೆ ಮಾಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹ ಎಂದಿದ್ದಾರೆ. 


ಇಂದು ಮಧ್ಯಾಹ್ನ ಪೆಟ್ರೋಲ್, ಡೀಸೆಲ್ ದರ ಇಳಿಕೆಘೋಷಣೆ ಮಾಡಿದ್ದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೇಂದ್ರ ಸರ್ಕಾರ ರೂ. 2.50 ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳೂ ಇಂಧನ ಸುಂಕವನ್ನು ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಆದರೆ, ಕರ್ನಾಟಕದಲ್ಲಿ ಈಗಾಗಲೇ ಸರ್ಕಾರ 2 ರೂ. ಕಡಿಮೆ ಮಾಡಿದೆ. ಹಾಗಾಗಿ ಇನ್ನಷ್ಟು ಕಡಿತಗೊಳಿಸಲು ಸಾಧ್ಯವಿಲ್ಲ ಎಂದು ಸಿಎಂ ಸ್ಪಷ್ಟವಾಗಿ ತಿಳಿಸಿದ್ದಾರೆ. ಈ ಮೂಲಕ ಒಟ್ಟಾರೆ ರೂ. 4.50 ರೂ ಪೆಟ್ರೋಲ್​ ಮತ್ತು ಡೀಸೆಲ್​ಗೆ ಕಡಿಮೆಯಾದಂತಾಗಿದೆ.