ಬೆಂಗಳೂರು: ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


"ಸಬ್ ಕಾ ಸಾಥ್-ಸಬ್ ಕಾ ವಿಕಾಸ್" ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು.


ವೈಚಾರಿಕ - ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು.


ಇದನ್ನೂ ಓದಿ: ಜನವರಿ 17 ರಂದು ಗರ್ಭಗುಡಿ ಪ್ರವೇಶಿಸಲಿರುವ ಶ್ರೀ ರಾಮ! ಆ ದಿನದ ಶೃಂಗಾರ ಹೇಗಿರಲಿದೆ ಗೊತ್ತಾ ? 


ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ.


ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ಹೊರುವವರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ? ಇದಕ್ಕೆ ನಾರಾಯಣಗುರುಗಳು ಹೇಳಿದ ಮಾರ್ಗ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ ನಿಮ್ಮದೇ ದೇವಸ್ಥಾನ ನಿರ್ಮಿಸಿಕೊಳ್ಳಿ.


ಯಾವ ಕೆಲಸವೂ ಮೇಲು ಅಲ್ಲ, ಕೀಳೂ ಅಲ್ಲ. ಈ ಕಾರಣಕ್ಕೇ ಕಾಯಕವೇ ಕೈಲಾಸ ಎಂದು ಶರಣರು ಹೇಳಿದ್ದಾರೆ. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು, ಅದನ್ನು ಎಲ್ಲರಿಗೂ ವಿತರಿಸಬೇಕು ಎನ್ನುವುದು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರಕಾರದ ಕಾರ್ಯಕ್ರಮಗಳೂ ಈ ಆಶಯಕ್ಕೆ ಪೂರಕವಾಗಿವೆ.


ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲಾ ಸಮುದಾಯಕ್ಕೆ ಸಿಕ್ಕರೆ ಮಾತ್ರ ಜಾತಿಗ್ರಸ್ಥ ಸಮಾಜ ಚಲನಶೀಲವಾಗುತ್ತದೆ. ಇಲ್ಲವಾದರೆ ಸ್ಥಗಿತಗೊಂಡ ಸಮಾಜ ಆಗುತ್ತದೆ.


ಇದನ್ನೂ ಓದಿ: ಮಕರ ಸಂಕ್ರಾಂತಿ ಪ್ರಯುಕ್ತ ಗೋವುಗಳಿಗೆ ಆಹಾರ ನೀಡಿದ ಮೋದಿ.


ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆ ಸೇರಿ ನನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು.


ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶಾಸಕರಾದ ಎಂ.ಚಂದ್ರಪ್ಪ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.





https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.