`ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವೇ ಇಲ್ಲ`
ಸ್ಪಷ್ಟ ಪಡಿಸಿದ ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಬೇಡಿಕೆಯನ್ನು ಈಡೇರಿಸಲು ಸಾಧ್ಯವೇ ಇಲ್ಲ ಎಂದು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ನಗರದಲ್ಲಿ ಸುದ್ದಿಯಾಗರ ಜೊತೆ ಮಾತನಾಡಿದ ಅವರು, ಇಂದು ನಡೆಯುವ ಸಭೆಯಲ್ಲಿ ಸಾರಿಗೆ ನೌಕರರ(Transport Employees) ಮನವೊಲಿಕೆಯಾಗುತ್ತದಾ? ಎಂಬುದನ್ನು ಕಾದು ನೋಡಬೇಕಾಗಿದೆ.
ರಾಜ್ಯದ ಹಲವೆಡೆ ರಸ್ತೆಗಿಳಿದ KSRTC ಬಸ್: ಎಸ್ಕಾರ್ಟ್ ಭದ್ರತೆಯಲ್ಲಿ BMTC ಬಸ್ ಸಂಚಾರ ಶುರು!
ಇಂದಿನ ಸಭೆಗೆ ಎಲ್ಲರನ್ನೂ ಆಹ್ವಾನ ಮಾಡಿದ್ದೇನೆ. ಇಂದು ಮಧ್ಯಾಹ್ನ 12 ಗಂಟೆಯೊಳಗೆ ಎಲ್ಲವೂ ಮುಗಿಯುತ್ತದೆ ಎಂಬ ಭರವಸೆ ಇದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಅನ್ನೋ ಬೇಡಿಕೆ ಈಡೇರಿಕೆ ಸಾಧ್ಯವೇ ಇಲ್ಲ. ಒಂದು ನಿಗಮಕ್ಕೆ ಆ ರೀತಿ ಮಾಡಿದರೆ ಬೇರೆ ನಿಗಮಗಳು ಬೇಡಿಕೆ ಇಡುತ್ತಾರೆ. ಹೀಗಾಗಿ ಆ ಬೇಡಿಕೆ ಈಡೇರಿಕೆ ಅಸಾಧ್ಯ. ಉಳಿದ ಎಲ್ಲ ಬೇಡಿಕೆಗಳನ್ನು ಆರ್ಥಿಕ ಇತಿಮಿತಿಗಳಲ್ಲಿ ಈಡೇರಿಸುತ್ತೇವೆ. ಇಂದಿನ ಸಭೆ ಯಶಸ್ವಿಯಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸಾರಿಗೆ ನೌಕರರ ಹೋರಾಟ: ಬೇಡಿಕೆಗಳ ಈಡೇರಿಕೆಗೆ ನಾಳೆ ಮಹತ್ವದ ಸಭೆ ಕರೆದ ಸಿಎಂ ಬಿಎಸ್ ವೈ!
ಎಸ್ಮಾ ಅನ್ನೋದು ಬ್ರಹ್ಮಾಸ್ತ್ರ. ಅದನ್ನು ಸದ್ಯಕ್ಕೆ ಜಾರಿ ಮಾಡುವುದಿಲ್ಲ. ಸಾರಿಗೆ ನೌಕರರೆಲ್ಲರೂ ನಮ್ಮ ಕುಟುಂಬವರು. ಕಷ್ಟದ ಪರಿಸ್ಥಿತಿಯಲ್ಲಿ ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ. ಇವತ್ತಿನ ಸಭೆಗೆ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಆಹ್ವಾನ ನೀಡಿಲ್ಲ. ಕೋಡಿಹಳ್ಳಿ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಮುಂದಿನ 2-3 ದಿನಗಳಲ್ಲಿ ಅದನ್ನು ಬಿಚ್ಚಿಡುತ್ತೇನೆ ಎಂದು ಸಚಿವ ಸವದಿ ಹೇಳಿದ್ದಾರೆ.
'ಸೋಮವಾರದಿಂದ ಸರ್ಕಾರಿ ಬಸ್ ದರದಲ್ಲಿ ರಾಜ್ಯದಲ್ಲಿ ರಸ್ತೆಗಿಳಿಯಲಿವೆ ಖಾಸಗಿ ಬಸ್'