ಬೆಂಗಳೂರು: ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ! ಕೊಹ್ಲಿ ಸೇರಿ ಮೂವರು ಪ್ರಮುಖ ಆಟಗಾರರೇ ಇಲ್ಲ!


ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡರು, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಲ್ಹಾದ್ ಜೋಷಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಸದಾನಂದ ಗೌಡ ಅವರು ಸೇರಿದಂತೆ ದೆಹಲಿಯಲ್ಲಿ ನಾಡನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ಚಲೋ ದಿಲ್ಲಿಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದೇನೆ ಎಂದು ಹೇಳಿದರು.


ಇದನ್ನೂ ಓದಿ: ವಯನಾಡ್ ಕ್ಷೇತ್ರದ ಮೇಲೆ CPI ಕಣ್ಣು! ಲೋಕ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕುತ್ತುತರುತ್ತಾ?


ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.