`ಅಮಿತ್ ಶಾ ಅವರು ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯ`-ಸಿದ್ದರಾಮಯ್ಯ
ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ` ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಹಿಂದಿ, ಇಂಗ್ಲೀಷ್, ತಮಿಳು,ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ. ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ.
"ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ' ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ. ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯ.
ಇದನ್ನೂ ಓದಿ: IPL 2022 : ಬುಮ್ರಾ ಮತ್ತು ನಿತೀಶ್ ರಾಣಾ ವಿರುದ್ಧ ಕಠಿಣ ಕ್ರಮ ಕೈಗೊಂಡ ಬಿಸಿಸಿಐ!
ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ.
ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ.
ತಮಿಳುನಾಡು, ಕೇರಳ,ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ.
ಇದನ್ನೂ ಓದಿ: Career: ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೋರ್ಸ್ : ಅರ್ಜಿ ಆಹ್ವಾನ
ಕೇಂದ್ರ ಗೃಹಸಚಿವರ ಈ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.