ಬೆಂಗಳೂರು : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ.ನಂಜುಂಡಿ ಅವರಿಗೆ ಇಂದು ಐಟಿ ಇಲಾಖೆ ಶಾಕ್ ನೀಡಿದೆ.  


COMMERCIAL BREAK
SCROLL TO CONTINUE READING

ಕೆ.ಪಿ.ನಂಜುಂಡಿ ಅವರಿಗೆ ಸೇರಿದ ಮಳಿಗೆಗಳು, ಮನೆ, ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ ಕಚೇರಿಗಳೂ ಸೇರಿ ೨೦ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಬೆಂಗಳೂರು, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿರುವ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. 


ಬೆಂಗಳೂರಿನ ಮತ್ತಿಕೆರೆಯ ಬಾಂಬೆ ಡೈಯಿಂಗ್ ರಸ್ತೆ ಬಳಿಯಿರುವ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್, ಸದಾಶಿವನಗರದಲ್ಲಿರುವ ಮನೆ ಮೇಲೆ 8 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹುಬ್ಬಳ್ಳಿಯ ಸ್ಟೇಶನ್ ರಸ್ತೆಯಲ್ಲಿರುವ ನಂಜುಂಡಿ ಮಾಲೀಕತ್ವದ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್, ಧಾರವಾಡದ ವಿಈಕಾನಂದ ವೃತ್ತದಲ್ಲಿರುವ ಲಕ್ಷ್ಮೀ ಗೋಲ್ಡ್ ಪ್ಯಾಲೇಸ್ ಮೇಲು ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. 


ಬೆಂಗಳೂರು ಹಾಗು ಗೋವಾ ಐಟಿ ಅಧಿಕಾರಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಈ ಸಂದರ್ಭದಲ್ಲಿ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.