ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಜಾಲಪ್ಪ ಅವರ ಮನೆ ಹಾಗೂ ಆಸ್ತಿ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, "ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ. 
ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ ನರೇಂದ್ರ ಮೋದಿ ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆ ನಾವು 
ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ" ಎಂದಿದ್ದಾರೆ.

ಇಂದು ಬೆಳಿಗ್ಗೆ ಮಾಜಿ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಚಿವ ಜಾಲಪ್ಪ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಅದ್ದಾಯ ತೆರಿಗೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ರಾಜಕೀಯ ಪಿತೂರಿ ಎಂದಿದ್ದಾರೆ.