ಶಿವಮೊಗ್ಗ: ಪ್ರಸ್ತುತ ಕರ್ನಾಟಕದಲ್ಲಿ ಇರುವುದು ಸಮ್ಮಿಶ್ರ ಸರ್ಕಾರ ಅಲ್ಲ, ಕಲಾಸಿಪಾಳ್ಯ ಸರ್ಕಾರ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ರಾತ್ರಿ ಬೆಂಗಳೂರಿನ ಈಗಲ್​ಟನ್ ರೆಸಾರ್ಟ್​ನಲ್ಲಿ ಕಾಂಗ್ರೆಸ್​ನ ಶಾಸಕರಾದ ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಈ ಬಗ್ಗೆ ಏನೂ ಗೊತ್ತಿಲ್ಲದಂತೆ ಇದ್ದಾರೆ. ಇದಕ್ಕೆ ಕಾರಣವಾದರೂ ಏನು ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.


ಮುಂದುವರೆದು ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಸರ್ಕಾರದ ಪ್ರಮುಖರು ರಾಜ್ಯದಲ್ಲಿ ಬರಗಾಲವನ್ನು ಕಡೆಗಣಿಸಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಸಿಎಂ ಕುಮಾರಸ್ವಾಮಿ ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ರೆಸಾರ್ಟ್ ರಾಜಕಾರಣದಲ್ಲಿ ಮುಳುಗಿದ್ದಾರೆ. ಇನ್ನು ಮುಂದೆಯಾದರೂ ಸಿಎಂ ಈ ಬಗ್ಗೆ ಕ್ರಮ ಕೈಗೊಂಡು ಬರಪಿದಿತ ಪ್ರದೇಶಗಳ ಜನರ ಸಮಸ್ಯೆಗಳನ್ನು ಬಗೆಹರಿಸಲಿ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.