SSLC PUC Pass Marks Reduce: ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ 10ನೇ ತರಗತಿ (SSLC) ಹಾಗೂ 12ನೇ ತರಗತಿ (PUC) ಅತ್ಯಂತ ಮಹತ್ವದ ಘಟ್ಟವಾಗಿರುತ್ತದೆ. ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿಯಲ್ಲಿ ಒಂದೇ ಒಂದು ವಿಷಯದಲ್ಲಿ 'ಫೇಲ್' ಆದರೂ ಸಹ ಕೆಲವರು ತಮ್ಮ ವಿದ್ಯಾಭ್ಯಾಸವನ್ನೇ ಮೊಟಕುಗೊಳಿಸುತ್ತಾರೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಾಗೂ ವಿದ್ಯಾರ್ಥಿಗಳು ಪದವಿ, ಉನ್ನತ ಪದವಿಗಳನ್ನು ಪಡೆದು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಕನಿಷ್ಠ ಪಾಸಿಂಗ್ ಅಂಕವನ್ನು ಕಡಿತಗೊಳಿಸಿದೆ.
ಪ್ರಸ್ತುತ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾಗಲು ಕನಿಷ್ಠ 35 ಅಂಕಗಳನ್ನು ಪಡೆದಿರಬೇಕು ಎಂಬ ನಿಯಮವಿತ್ತು. ಇದೀಗ ಸಾರ್ವಜನಿಕ ಅಭಿಪ್ರಾಯ ಪಡೆದು ಪಾಸ್ ಮಾರ್ಕ್ಸ್ ಅಂಕ ಕಡಿತಗೊಳಿಸಿರುವ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪಾಸಿಂಗ್ ಮಾರ್ಕ್ಸ್ ಅನ್ನು 35 ರಿಂದ 33%ಕ್ಕೆ ಇಳಿಕೆ ಮಾಡಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ಪಾಸಿಂಗ್ ಅಂಕ ಕಡಿತಗೊಳಿಸಿರುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಅಧಿಕೃತವಾಗಿ ಘೋಷಣೆ ಮಾಡಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಕನಿಷ್ಠ ಮಾರ್ಕ್ಸ್ ಅನ್ನು ಕಡಿತಗೊಳಿಸಲಾಗಿದೆ. 2025-26ನೇ ಸಾಲಿನಿಂದಲೇ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿಯಲ್ಲಿ ಎಷ್ಟು ಮಾರ್ಕ್ಸ್ ಬಂದರೆ ಪಾಸ್:
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 625ಕ್ಕೆ ಕನಿಷ್ಠ 206 ಅಂಕ ಗಳಿಸಿದರೆ ಪಾಸ್ ಆಗುತ್ತಾರೆ. ಆದಾಗ್ಯೂ, ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಕನಿಷ್ಠ 30 ಗಳಿಸುವುದು ಕಡ್ಡಾಯವಾಗಿರುತ್ತದೆ.
ಪಿಯುಸಿಯಲ್ಲಿ ಪಾಸ್ ಆಗಲು ಎಷ್ಟು ಮಾರ್ಕ್ಸ್ ಬೇಕು?
ಅಂತೆಯೇ, ಪಿಯುಸಿಯಲ್ಲಿ 600ಕ್ಕೆ 198 ಅಂಕ ಪಡೆದರೆ ವಿದ್ಯಾರ್ಥಿಗಳು ಪಾಸ್ ಆಗುತ್ತಾರೆ. ಪಿಯುಸಿ ಪರೀಕ್ಷೆಯಲ್ಲೂ ಕೂಡ ಪ್ರತಿ ವಿಷಯದಲ್ಲೂ ಲಿಖಿತ ಹಾಗೂ ಆಂತರಿಕ ಅಂಕ ಸೇರಿ 30ಅಂಕ ಬರೋದು ಕಡ್ಡಾಯವಾಗಿರುತ್ತದೆ.
ಇದನ್ನೂ ಓದಿ- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಇನ್ನು ಮುಂದೆ ಬೆಂಗಳೂರಿನಲ್ಲೇ ಫಾರಿನ್ ಶಿಕ್ಷಣ!
ಇದನ್ನೂ ಓದಿ- ನಿರುದ್ಯೋಗ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರದ ಕ್ರಮ 'ಬೃಹತ್ ಉದ್ಯೋಗ ಮೇಳ': ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್









