Jagadish Shettar political switch news: ಬಿಜೆಪಿಯತ್ತ ಮುಖ ಮಾಡಿದ ಜಗದೀಶ್ ಶೆಟ್ಟರ್ : ಲೋಕಸಭೆ ಚುನಾವಣೆಗೂ ಮುನ್ನ ಕಮಲ ಪಾಳಯಕ್ಕೆ ಮರಳಿದ ಮಾಜಿ ಮುಖ್ಯಮಂತ್ರಿ

Jagadish Shettar rejoining BJP from Congress : ಶೆಟ್ಟರ್ ಮರಳಿ ಬಿಜೆಪಿ ಸೇರಿದ್ದಾರೆ. ಜಗದೀಶ್ ಶೆಟ್ಟರ್ ಕಳೆದ ಏಪ್ರಿಲ್‌ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು. ಬಿ ವೈ ವಿಜಯೇಂದರ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್‌ ಸದಸ್ಯತ್ವ ಮತ್ತು ಎಮ್‌ಎಲ್‌ಸಿ ರಾಜೀನಾಮೆಯನ್ನೂ ಫ್ಯಾಕ್ಸ್‌ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದೆ.

Written by - Ranjitha R K | Last Updated : Jan 25, 2024, 02:44 PM IST
  • ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ
  • ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಬಹುದು ಎನ್ನಲಾಗಿದೆ.
  • ಬಿಜೆಪಿಗೆ ಮರಳಿದರೆ ಅವರ ಸ್ಥಾನ ಗಟ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ.
Jagadish Shettar political switch news: ಬಿಜೆಪಿಯತ್ತ ಮುಖ ಮಾಡಿದ ಜಗದೀಶ್ ಶೆಟ್ಟರ್ : ಲೋಕಸಭೆ ಚುನಾವಣೆಗೂ ಮುನ್ನ ಕಮಲ ಪಾಳಯಕ್ಕೆ ಮರಳಿದ ಮಾಜಿ ಮುಖ್ಯಮಂತ್ರಿ  title=

Karnataka political developments 2024: ಲೋಕಸಭೆ ಚುನಾವಣಾ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿದ್ದಾರೆ. ಈ ಕುರಿತಂತೆ ಶೆಟ್ಟರ್ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಬಿ ವೈ ವಿಜಯೇಂದರ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್‌ ಸದಸ್ಯತ್ವ ಮತ್ತು ಎಮ್‌ಎಲ್‌ಸಿ ರಾಜೀನಾಮೆಯನ್ನೂ ಫ್ಯಾಕ್ಸ್‌ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದೆ. ಜಗದೀಶ್ ಶೆಟ್ಟರ್ ಕಳೆದ ಏಪ್ರಿಲ್‌ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು. 

ಬಿಜೆಪಿಗೆ ರಾಜೀನಾಮೆ ನೀಡಿದ್ದೇಕೆ ? :
ಕರ್ನಾಟಕದಲ್ಲಿ ಲಿಂಗಾಯತ ಸಮುದಾಯದ ಪ್ರಭಾವ ಹೆಚ್ಚಿದೆ. ಜಗದೀಶ್ ಶೆಟ್ಟರ್ ಲಿಂಗಾಯತ ಸಮುದಾಯದ ದೊಡ್ಡ ನಾಯಕ. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಆದರೆ, ಈಗ ಮತ್ತೆ ಬಿಜೆಪಿಗೆ ಮರಳಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಜೊತೆಗಿನ ಅವರ ಸಂಬಂಧ ಅಷ್ಟು ಚೆನ್ನಾಗಿಲ್ಲ ಎಂದು ಹೇಳಲಾಗಿದೆ. 

ಇದನ್ನೂ ಓದಿ : Vijayapura: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪೊಲೀಸಪ್ಪ..!

ವಿಧಾನಸಭೆ ಚುನಾವಣೆಯಲ್ಲಿ ಸೋಲು :
ಜಗದೀಶ್ ಶೆಟ್ಟರ್ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ  ಟಿಕೆಟ್‌ ಪಡೆದು ಕಣಕ್ಕಿಳಿದಿದ್ದರು. ಆದರೆ, ಕಾಂಗ್ರೆಸ್ ನಿಂದ ಕಣಕ್ಕಿಳಿದಿರುವ ಶೆಟ್ಟರ್ ಅವರನ್ನು ಮತದಾರ ಒಪ್ಪಿಕೊಳ್ಳಲಿಲ್ಲ, ಪರಿಣಾಮ ಅವರು ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಎದುರಿಸಬೇಕಾಯಿತು.  ಶೆಟ್ಟರ್ ಹುಬ್ಬಳ್ಳಿಯ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿಯ ಮಹೇಶ ಟೆಂಗಿನಕಾಯಿ ಅವರನ್ನು ಭಾರಿ ಮತಗಳ ಅಂತರದಿಂದ ಸೋಲಿಸಿದ್ದರು. 

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿಗೆ ವಾಪಸಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮಧುರಾ ಕಾಲೋನಿಯಲ್ಲಿರುವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಪಾಲಿಕೆ ಸದಸ್ಯರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. 

ಇದನ್ನೂ ಓದಿ : ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News