ಜಗದೀಶ ಶೆಟ್ಟರ್ ಸೋಲಿನ ಆತ್ಮಾವಲೋಕನ: ಲೋಕಸಭೆ ತಯಾರಿಗೆ ತೆರೆಮರೆಯಲ್ಲಿ ಚಿಂತನ ಮಂಥನ
2023ರ ರಾಜ್ಯ ವಿಧಾನಸಭಾ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ನಿಜಕ್ಕೂ ಹೈ ವೋಲ್ಟೇಜ್ ಕಣವಾಗಿ ಪರಿಣಮಿಸಿತ್ತು. ಶಿಷ್ಯನ ವಿರುದ್ಧವೇ ಗುರುವಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲನ್ನು ಅನುಭವಿಸಿದ್ದಾರೆ.
Jagadish Shetter: ರಾಜ್ಯ ರಾಜಕಾರಣದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ರಾಷ್ಟ್ರೀಯ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ಬಹುದೊಡ್ಡ ಹೊಡೆತವನ್ನು ಕೊಟ್ಟಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ನಿಟ್ಟಿನಲ್ಲಿ ತಮ್ಮ ಸೋಲನ್ನು ಒಪ್ಪಿಕೊಂಡಿರುವ ಬಿಜೆಪಿ ಅಧಿಕಾರವನ್ನು ಕಳೆದುಕೊಂಡಿದೆ. ಆದರೆ ಭಾರತೀಯ ಜನತಾ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರಾಭವಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ಈಗ ಮಾಜಿ ಸಿಎಂ ಮುಂದಾಗಿದ್ದಾರೆ.
2023ರ ರಾಜ್ಯ ವಿಧಾನಸಭಾ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ನಿಜಕ್ಕೂ ಹೈ ವೋಲ್ಟೇಜ್ ಕಣವಾಗಿ ಪರಿಣಮಿಸಿತ್ತು. ಶಿಷ್ಯನ ವಿರುದ್ಧವೇ ಗುರುವಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲನ್ನು ಅನುಭವಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಆತ್ಮಾವಲೋಕನ ಮಾಡಿಕೊಳ್ಳಲು ಹುಬ್ಬಳ್ಳಿಯ ರಾಯ್ಕರ್ ಗೇಸ್ಟ್ ಹೌಸ್ ನಲ್ಲಿ ಕಾರ್ಯಕ್ರಮ ಮೂಲಕ ಆತ್ಮಾವಲೋಕನ ಮಾಡಿಕೊಳ್ಳುತ್ತಿರುವ ಮಾಜಿ ಸಿಎಂ ಸೋಲಿನ ಕಾರಣವನ್ನು ಪರಾಮರ್ಶೆ ಮಾಡಿ ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಕಾರ್ಯವನ್ನು ಮಾಡಿದ್ದಾರೆ.
ಇದನ್ನೂ ಓದಿ- ಐದು ಗ್ಯಾರಂಟಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ದಿ: ಸಚಿವ ಸಂತೋಷ ಲಾಡ್
ಇನ್ನೂ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹಿರಿಯ ನಾಯಕರಾದ ಪ್ರಫುಲ್ ಚಂದ್ರ ರಾಯನಗೌಡ್ರ, ಜಕ್ಕಪ್ಪನವರ, ಮಹೇಂದ್ರ ಸಿಂಘಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಗಂಗಾಧರ ದೊಡ್ಡವಾಡ, ವೀರಣ್ಣ ನೀರಲಗಿ, ಅನ್ವರ್ ಮುಧೋಳ, ಪಾರಸಮಲ್ ಜೈನ್, ವಸಂತ ಲದ್ವಾ, ಅನೀಲಕುಮಾರ್ ಪಾಟೀಲ, ಅಲ್ತಾಫ್ ಹಳ್ಳೂರ, ಸದಾನಂದ ಡಂಗನವರ ಸೇರಿದಂತೆ ನೂರಾರು ಮುಖಂಡರು ಸಾವಿರಾರು ಕಾರ್ಯಕರ್ತರು ಭಾಗವಹಿಸುವ ಮೂಲಕ ಆತ್ಮಾವಲೋಕನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ ವಿನೂತನ ರೀತಿಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲಾಯಿತು.
ಇದನ್ನೂ ಓದಿ- ಗ್ರಾ.ಪಂಚಾಯತ್ ಗ್ರಂಥಾಲಯಗಳಿಗೆ 3 ಸಾವಿರ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದ ಚನ್ನವೀರ ಕಣವಿ ಕುಟುಂಬ
ಒಟ್ಟಿನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲಿಸಲು ಹೋಗಿ ರಾಜ್ಯದಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದೆ ಎಂಬುವಂತ ಮಾತನ್ನು ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಪುನರ್ ಉಚ್ಚರಿಸುವ ಮೂಲಕ ಶೆಟ್ಟರ್ ಸೋಲಿನ ಪರಾಮರ್ಶೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಭಾಗದಿಂದ ಜಗದೀಶ್ ಶೆಟ್ಟರ್ ಅವರನ್ನೇ ಕಣಕ್ಕಿಳಿಸುವ ಬಗ್ಗೆಯೂ ತೆರೆಮರೆಯಲ್ಲಿ ಚಿಂತನ ಮಂಥನ ಆರಂಭವಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.