ಜಲೀಲ್ ಹತ್ಯೆ ಹಿನ್ನೆಲೆ ಸುರತ್ಕಲ್‌ನಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ

ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ಕಮೀಷನರ್‌ ಎನ್‌. ಶಶಿಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. 

Written by - Krishna N K | Last Updated : Dec 25, 2022, 11:24 AM IST
  • ಜಲೀಲ್‌ ಹತ್ಯೆ ಹಿನ್ನೆಲೆ ಸುರತ್ಕಲ್‌ನಲ್ಲಿ ನಿಷೇಧಾಜ್ಞೆ ಜಾರಿ
  • ಸುರತ್ಕಲ್‌ನಲ್ಲಿ ಡಿ 25 ಬೆಳಿಗ್ಗೆ 10 ರಿಂದ ಡಿ 27 ರವರೆಗೆ ಎರಡು ದಿನ 144 ಸೆಕ್ಷನ್ ಜಾರಿ,
  • ಕಮೀಷನರ್‌ ಎನ್‌. ಶಶಿಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ.
ಜಲೀಲ್ ಹತ್ಯೆ ಹಿನ್ನೆಲೆ ಸುರತ್ಕಲ್‌ನಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ title=

Mangaluru Jaleel Murder Case : ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ಕಮೀಷನರ್‌ ಎನ್‌. ಶಶಿಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. 

ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಾದ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ದ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಡಿ25 ಬೆಳಿಗ್ಗೆ 6 ರಿಂದ 27 ರ ಬೆಳಿಗ್ಗೆ 6 ರವರೆಗೆ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಇದನ್ನೂ ಓದಿ: ಕರಡಿ ದಾಳಿಗೆ ದನಗಾಹಿ ಬಲಿ, ವ್ಯಕ್ತಿ ಶವದ ಜೊತೆಗಿನ ಕರಡಿ ಚಿತ್ರ ಸೆರೆ

ಅಲ್ಲದೇ ಈ ಎಲ್ಲಾ ಪ್ರದೇಶಗಳಲ್ಲಿರುವ ಮದ್ಯದಂಗಡಿ ಹಾಗೂ ಮದ್ಯ ಮಾರಾಟವನ್ನು ಡಿ 25 ಬೆಳಿಗ್ಗೆ 10 ರಿಂದ ಡಿ 27 ಬೆಳಿಗ್ಗೆ 10 ಗಂಟೆಯವರೆಗೆ ಮುಚ್ಚುವಂತೆ ತಿಳಿಸಲಾಗಿದೆ. ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಕರ್ತವ್ಯ ನಿರ್ವಹಿಸುವವರು ಡಿ25 ಹಾಗೂ 26 ರಂದು ಸಂಜೆ 6 ಗಂಟೆಯವರೆಗೆ ಮಾತ್ರ ಕರ್ತವ್ಯ ನಿರ್ವಹಿಸುವ ಬಗ್ಗೆಯೂ ತಿಳಿಸಲಾಗಿದೆ. ರಾತ್ರಿ ಹೊತ್ತು ಯಾರೂ ಕೂಡ ತಿರುಗಾಡದಂತೆ ಮಂಗಳೂರು ನಗರ ಕಮೀಷನರ್ ಎನ್.ಶಶಿಕುಮಾರ್ ಆದೇಶಿಸಿದ್ದಾರೆ.

ಈಗಾಗಲೇ ಜಲೀಲ್ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಮೂಲಕ ಜಲೀಲ್‌ ಮೃತದೇಹವನ್ನು ಕಾಟಿಪಳ್ಳಕ್ಕೆ ರವಾನಿಸಲಾಗಿದೆ. ಸ್ಥಳದಲ್ಲಿ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರವಹಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News