ಸೆ. 15ರಂದು ಬೆಳಗಾವಿಯಲ್ಲಿ ನಡೆಯಲಿದೆ ಸಿಎಂ `ಜನತಾ ದರ್ಶನ`
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶನಿವಾರ ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೆಪ್ಟೆಂಬರ್15 ರಂದು ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ.
ಸೆಪ್ಟೆಂಬರ್15 ರಂದು ಬೆಳಿಗ್ಗೆ ಬೆಳಗಾವಿಯಲ್ಲಿ ರಾಷ್ಟ್ರಪತಿಗಳೊಂದಿಗೆ ಕೆಎಲ್ಎಸ್ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3.00 ಗಂಟೆಯಿಂದ 5.00 ಗಂಟೆವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕರಿಸುವರು ಎನ್ನಲಾಗಿದೆ.