ಜಂತಕಲ್ ಹಗರಣ: ಮಾಜಿ ಸಿಎಂ ಹೆಚ್‌ಡಿಕೆಗೆ ಬಿಗ್‌ ರಿಲೀಫ್‌

ಜಂತಕಲ್ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೆಸರನ್ನೂ ಎಸ್‍ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.   

Updated: Aug 29, 2019 , 09:56 AM IST
ಜಂತಕಲ್ ಹಗರಣ: ಮಾಜಿ ಸಿಎಂ ಹೆಚ್‌ಡಿಕೆಗೆ ಬಿಗ್‌ ರಿಲೀಫ್‌
File Image

ಬೆಂಗಳೂರು: ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೆಸರನ್ನೂ ಎಸ್‍ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಇದರಿಂದಾಗಿ ಮಾಜಿ ಸಿಎಂ ಹೆಚ್‌ಡಿಕೆಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. 

ಈ ಮೊದಲು ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ವಿನೋದ್ ಘೋಯಲ್‍ಗೆ ಭೂಮಿ ಮಂಜೂರು ಮಾಡುವಂತೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾಗೆ ಮೌಖಿಕವಾಗಿ ಆದೇಶಿಸಿದ್ದರು ಎನ್ನುವ ಆರೋಪವಿತ್ತು. ಇದಕ್ಕೆ ಸಂಬಂಧಪಟ್ಟಂತೆ ಎಸ್‍ಐಟಿ ಅಧಿಕಾರಿಗಳು ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಿದಾಗ ಈ ಹೇಳಿಕೆ ನೀಡಿದ್ದರು.

ಬಳಿಕ ಡೇರಿಯಾ ಹೇಳಿಕೆ ಆಧರಿಸಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ಬಳಿಕ ಕುಮಾರಸ್ವಾಮಿ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಎಸ್ಐಟಿ ಜಂತಕಲ್ ಹಗರಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟು, ವಿನೋದ್ ಘೋಯಲ್ ಹಾಗೂ ಗಗನ್ ಬಡೇರಿಯಾ(ಗಂಗಾರಾಮ್ ಐಎಎಸ್ ಅಧಿಕಾರಿ ಮಗ) ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.