ಬೆಂಗಳೂರು: ಜವಾಹರ ನವೋದಯ ವಿದ್ಯಾಲಯದ 2020-21 ನೆಯ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಫಾರಂಗಳನ್ನು www.navodaya.gov.in ಮತ್ತು  www.nvsadmissionclassix.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 29 ರವರೆಗೆ  ವಿಸ್ತರಿಸಲಾಗಿದೆ.


COMMERCIAL BREAK
SCROLL TO CONTINUE READING

5ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿ ನಮೂನೆಯನ್ನು  ಭರ್ತಿ ಮಾಡಿ ಆಪ್‍ಲೋಡ ಮಾಡಬೇಕು. ಹಾಗೂ 9ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ. 8 ನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ 919731419209, 9164559704, 8762564087, 9481929952 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.