ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್`ಗೆ ಸೇರ್ಪಡೆಯಾಗಲಿದ್ದಾರಾ?
ಜೆಡಿಎಸ್ ವಿರುದ್ಧ ಬಂಡಾಯವೆದ್ದಿದ್ದ 7 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ನಿಗದಿಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಜೆಡಿಎಸ್ ವಿರುದ್ಧ ಬಂಡಾಯವೆದ್ದಿದ್ದ 7 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.
ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ, ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ, ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ್ ಅವರು ಮಾರ್ಚ್ 24ರಂದು ಸ್ಪೀಕರ್ ಕೋಳಿವಾಡ ಅವರಿಗೆ ರಾಜಿನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.
ನಂತರ ಮಾರ್ಚ್ 25 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಈ ಏಳೂ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.