ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಲು ಬಯಸಿದೆ.ಕೋಲಾರ, ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಒಪ್ಪಿಗೆ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ʼಬಾನದಾರಿಯಲ್ಲಿʼ ಅಪ್ಪುವನ್ನು ಸ್ಮರಿಸಿದ ಹಿರಿಯ ನಟ ರಂಗಾಯಣ ರಘು


ತಮ್ಮ ಪಕ್ಷವು ಇಂಡಿಯಾ  (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ) ಅಥವಾ ಎನ್‌ಡಿಎ ಜೊತೆಯಲ್ಲಿಲ್ಲ ಎಂದು ದೇವೇಗೌಡರು ಹೇಳಿಕೊಂಡ ಕೆಲವು ದಿನಗಳ ನಂತರ ಈ ಕ್ರಮವು ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ದೇವೇಗೌಡರು ಹೇಳಿದ್ದರು.


ಇದನ್ನೂ ಓದಿ : ದೇವಾಲಯಗಳ ಸ್ವಚ್ಛತೆಗೆ ಮುಜರಾಯಿ ಇಲಾಖೆ ಖಡಕ್ ನಿರ್ಧಾರ..!!


ಒಂದು ಕಾಲದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷ ವಾಗಿದ್ದ ಜೆಡಿಎಸ್ ಗೆ ಬೆಂಗಳೂರಿನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಮಾವೇಶಕ್ಕೆ ಆಹ್ವಾನ ನೀಡಿರಲಿಲ್ಲ. "ಕೆಲವು ಕಾಂಗ್ರೆಸ್ ನಾಯಕರಿಗೆ ನಾನು ಬೇಕಾಗಿಲ್ಲ... ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನನ್ನ ಒಳ್ಳೆಯ ಸ್ನೇಹಿತ (ಆದರೆ) ಕಾಂಗ್ರೆಸ್ ನನಗೆ ಬೇಡವಾದ್ದರಿಂದ ನಾನು ಬಿಟ್ಟುಬಿಟ್ಟೆ" ಎಂದು ದೇವೇಗೌಡರು ಹೇಳಿದರು. 


ನಿರೀಕ್ಷಿತ ಮೈತ್ರಿ ಕುರಿತು ಪಕ್ಷದ ಪದಾಧಿಕಾರಿಗಳ ಅಭಿಪ್ರಾಯ ಪಡೆಯಲು ದೇವೇಗೌಡರ ನಿವಾಸದಲ್ಲಿ ಬುಧವಾರ ಸಭೆ ನಡೆಯಿತು. ಬಿಜೆಪಿ ಜತೆಗಿನ ಮೈತ್ರಿಗೆ ಹೆಚ್ಚಿನ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.