ರಾಮನಗರ: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯ ಬಗ್ಗೆ ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರಕ್ಕೆ ಪೂರ್ಣ ಸಹಮತ ವ್ಯಕ್ತಪಡಿಸಿರುವ ರಾಮನಗರ ಜಿಲ್ಲೆಯ ಜೆಡಿಎಸ್ ಮುಖಂಡರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಆದೇಶಕ್ಕೆ ತಕ್ಕಂತೆ ಕೆಲಸ ಮಾಡುವುದಾಗಿ ಘೋಷಣೆ ಮಾಡಿದರು.


COMMERCIAL BREAK
SCROLL TO CONTINUE READING

ಬಿಡದಿಯಲ್ಲಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ತೋಟದಲ್ಲಿ ನಡೆದ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಮುಂದಿನ ರಾಜಕೀಯ ಬೆಳವಣಿಗೆ ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಸ್ತೃತ ಸಮಾಲೋಚನೆ ನಡೆಸಲಾಯಿತು. ಈ ವೇಳೆ ಕುಮಾರಸ್ವಾಮಿ, ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎ.ಮಂಜುನಾಥ್ ಅವರು ಜಿಲ್ಲೆಯ ಹಿರಿಯ ಮುಖಂಡರ ಜೊತೆಗೆ ಚರ್ಚೆ ನಡೆಸಿದರು.


ಸಭೆಯಲ್ಲಿ ಮಾಗಡಿ, ಚನ್ನಪಟ್ಟಣ, ಕನಕಪುರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳ ನೂರಾರು ಮುಖಂಡರು ಭಾಗಿಯಾಗಿ ತಮ್ಮ ಅಭಿಪ್ರಾಯ ಮಂಡಿಸಿದರು. ಪಕ್ಷ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ತಾವೆಲ್ಲರೂ ಬದ್ಧವೆಂದು ಅವರು ಹೇಳಿದರು. ಇದೇ ವೇಳೆ ನಿಖಿಲ್ ಕುಮಾರಸ್ವಾಮಿಯವರು ಜಿಲ್ಲೆಯ ಮುಖಂಡರ ಜೊತೆ ತಮ್ಮ ಭಾವನೆಗಳನ್ನು ಹಂಚಿಕೊಂಡರು.


ಇದನ್ನೂ ಓದಿ: ಅತ್ತಿಬೆಲೆ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ!


ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿದೆ!


ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎ.ಮಂಜುನಾಥ್ ಮಾತನಾಡಿ, ‘ನಮ್ಮ ವಿರೋಧಿಗಳೂ ಪಿತೂರಿ ಮಾಡಿದರು. ರಾತ್ರೋರಾತ್ರಿ ಕೂಪನ್‍ಗಳನ್ನು ಹಂಚಿ ಮುಗ್ಧ ಮತದಾರರನ್ನು ಯಾಮಾರಿಸಿ ಚುನಾವಣೆ ಗೆದ್ದಿದ್ದಾರೆ. ಈಗ ಮೆರೆಯುತ್ತಿದ್ದಾರೆ. ಇದು ಬಹಳ ದಿನ ನಡೆಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಮೊದಲಿನಿಂದಲೂ ನಮ್ಮ ಪಕ್ಷಕ್ಕೆ ಬೆನ್ನಿಗೆ ಚೂರಿ ಹಾಕುತ್ತಲೇ ಇದೆ. ಒಂದು ಕಡೆ ಜಾತ್ಯತೀತ ತತ್ವಗಳ ಬಗ್ಗೆ ಮಾತನಾಡುವ ಆ ಪಕ್ಷ, ಇನ್ನೊಂದೆಡೆ ಆ ತತ್ವದ ಪಕ್ಷಗಳನ್ನು ಮೂಲೋತ್ಪಾಟನೆ ಮಾಡುತ್ತಿದೆ. ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ಕಾಂಗ್ರೆಸ್ ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದೆ. ಅಲ್ಪಸಂಖ್ಯಾತರಿಗೆ ಜೆಡಿಎಸ್ ಅನ್ಯಾಯ ಮಾಡುತ್ತಿದೆ ಎಂದು ‘ಕೈ’ ಪಕ್ಷ ಹೊಸ ಸುಳ್ಳು ಹಬ್ಬಿಸುತ್ತಿದೆ. ಹಿಂದೆ ಈ ಸಮುದಾಯ ಕಷ್ಟಕ್ಕೆ ಸಿಲುಕಿದಾಗ ಕುಮಾರಸ್ವಾಮಿ ಒಬ್ಬರೇ ದನಿ ಎತ್ತಿದ್ದು. ಇವತ್ತು ಅಲ್ಪಸಂಖ್ಯಾತರನ್ನು ಓಲೈಸುವ ಕಾಂಗ್ರೆಸ್‍ನವರಿಗೆ ಎದ್ದುನಿಂತು ಅವರ ಬಗ್ಗೆ ಮಾತನಾಡುವ ಯೋಗ್ಯತೆಯಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.


2018ರಲ್ಲಿ ಕುಮಾರಸ್ವಾಮಿಯವರು ಅಧಿಕಾರಕ್ಕೆ ಬಂದ 11ನೇ ದಿನಕ್ಕೆ ರಾಮನಗರ ಜಿಲ್ಲೆಗೆ 540 ಕೋಟಿ ರೂ. ಅನುದಾನ ಕೊಟ್ಟು ಸತ್ತೆಗಾಲ ಯೋಜನೆಗೆ ಚಾಲನೆ ಕೊಟ್ಟರು. ಇವರು ಅಧಿಕಾರಕ್ಕೆ ಬಂದು ನಾಲ್ಕೈದು ತಿಂಗಳು ಆಯಿತು, ಇನ್ನು ಜಿಲ್ಲೆಗೆ ಒಂದು ಬಿಸಿಗಾಸು ಅನುದಾನ ಬಂದಿಲ್ಲ ಎಂದು ಟೀಕಿಸಿದರು. ಪೊಲೀಸ್ ಠಾಣೆಗಳ ಮೂಲಕ ನಮ್ಮ ಮುಖಂಡರು, ಕಾರ್ಯಕರ್ತರಿಗೆ ಹೆದರಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ನೀಚ ಕೆಲಸ ಮಾಡುತ್ತಿದ್ದಾರೆ. ಆಮಿಷ ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಲೋಕಸಭೆ ಚುನಾವಣೆಯಲ್ಲಿ ನಾವು ತಕ್ಕ ಉತ್ತರ ಕೊಡಬೇಕಿದೆ. ಸಂಸದರು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ. ಲೋಕಲ್ ರಾಜಕೀಯ ಮಾಡಿಕೊಂಡು ಪುಢಾರಿ ಕೆಲಸ ಮಾಡುತ್ತಿದ್ದಾರೆ. 3 ಸಲ ಗೆದ್ದು ಏನು ಮಾಡಿದಿರಿ? ಕೇಸ್ ಹಾಕಿಸುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾಯಚೂರಿನಲ್ಲಿ ಸರಪಳಿ ಬಿಗಿದು ಯುವಕನ ಗೃಹಬಂಧನ!


ಪೊಲೀಸರನ್ನು ಬಳಕೆ ಮಾಡಿಕೊಂಡು ನಾವು ರಾಜಕೀಯ ಮಾಡಿಲ್ಲ, ಅದನ್ನು ಕುಮಾರಣ್ಣ ಕಲಿಸಲಿಲ್ಲ. ಆದರೆ ಪೊಲೀಸರು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನಮ್ಮ ಮುಖಂಡರು, ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ನಿಮ್ಮ ವಿರುದ್ಧ ಹೋರಾಟ ಮಾಡುತ್ತೇವೆ. ಆಯಾ ಪೊಲೀಸ್ ರಾಣೆಗಳ ಮುಂದೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲೆಯ ಹಿರಿಯ ನಾಯಕರಾದ ಸುಬ್ಬಾ ಶಾಸ್ತ್ರಿ, ಹಾಪ್ ಕಾಮ್ಸ್ ದೇವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜು, ಹಿರಿಯ ಮುಖಂಡ ಪ್ರಸನ್ನಗೌಡ, ಕಬ್ಬಾಳೆಗೌಡ, ಚಿನ್ನಸ್ವಾಮಿ, ನಾಗರಕಲ್ಲು ದೊಡ್ಡಿ ಶಿವಣ್ಣ, ನರಸಿಂಹ ಮೂರ್ತಿ ಮುಂತಾದ ಹಿರಿಯ ಮುಖಂಡರು ತಮ್ಮ ಅಭಿಪ್ರಾಯ ಮಂಡಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.