ಬೆಂಗಳೂರು: ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ- ಗಂಗಾ ರಥಯಾತ್ರೆಗೆ ನಾಳೆಯಿಂದ (ಏಪ್ರಿಲ್ 16) ಚಾಲನೆ ಸಿಗಲಿದೆ.


COMMERCIAL BREAK
SCROLL TO CONTINUE READING

ಭಾನುವಾರ ಬೆಳಗ್ಗೆ 11 ಗಂಟೆಗೆ ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಹದಿನೈದು ಗಂಗಾ ರಥಗಳು ನಿಗಧಿತ ಸ್ಥಳಗಳನ್ನು ತಲುಪಿದ್ದು, ಆಯಾ ಜಿಲ್ಲೆಗಳ ಪಕ್ಷದ ಅಧ್ಯಕ್ಷರು, ಶಾಸಕರು, ಕಾರ್ಯಕರ್ತರು ಅವುಗಳನ್ನು ಬರ ಮಾಡಿಕೊಂಡಿದ್ದಾರೆ.


ನಾಳೆ ಬೆಳಗ್ಗೆ ವೇದ ಮಂತ್ರ ಘೋಷಣೆ, ಪೂಜೆ, ಮಂಗಳ ವಾದ್ಯಗಳ ಸದ್ದು, ಕಲಾ ತಂಡಗಳ ಮೆರವಣಿಗೆ, ಕಲಶ ಪೂಜೆ, ಪಕ್ಷದ ಕಾರ್ಯಕರ್ತೆಯರಿಂದ ಕಲಶ ಮೆರವಣಿಗೆ ಇತ್ಯಾದಿಗಳ ನಡುವೆ ಪುಣ್ಯಜಲವನ್ನು ಸಂಗ್ರಹ ಮಾಡಿಕೊಳ್ಳಲಾಗುವುದು.


ಮಾಜಿ ಪ್ರಧಾನಮಂತ್ರಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದಲ್ಲಿ ಕಾವೇರಿ ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗುವರು.


ಇದನ್ನೂ ಓದಿ: 'ಎಲ್ಲಾ ಸರ್ಕಾರದಲ್ಲೂ ಪರ್ಸೆಂಟ್ ವಿಚಾರ ನಡೆಯುತ್ತಿದೆ, ಯಾವ ಸರಕಾರದಲ್ಲಿ ನಡೆಯುವುದಿಲ್ಲ ಹೇಳಿ?'


ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ  ಜಲಾಶಯದಲ್ಲಿ ಜಲಸಂಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಇದಲ್ಲದೆ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲೆಯ ಹೇಮವತಿಯಲ್ಲಿ, ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ತದ ಉತ್ತರ ಪಿನಾಕಿನಿ ನದಿಯಲ್ಲಿ ಜಲ ಸಂಗ್ರಹ ಮಾಡಲಿದ್ದಾರೆ.


Rahu Gochar 2022: ಜಾತಕದಲ್ಲಿ ರಾಹು ದೋಷದ ಲಕ್ಷಣಗಳೇನು? ದುಃಖಗಳಿಂದ ಕೂಡಿರುತ್ತದೆ ಜೀವನ


ಒಟ್ಟು 94 ಕಡೆ ಜಲ ಸಂಗ್ರಹ:


ಮೆ 8ರವರೆಗೂ ನಡೆಯಲಿರುವ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 94 ಕಡೆ ಜಲ ಸಂಗ್ರಹ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.


ರಾಜ್ಯದ ನೀರಾವರಿ ಯೋಜನೆಗಳನ್ನು ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತದ ಸರಕಾರ ಸಿಕ್ಕಿದರೆ ಐದೇ ವರ್ಷಗಳಲ್ಲಿ ಅನುಷ್ಟಾನಕ್ಕೆ ತರಲಾಗುವುದು ಎಂದು ಇದೇ ವೇಳೆ ಅವರು ಘೋಷಣೆ ಮಾಡಿದ್ದಾರೆ.ರಾಜ್ಯದ 180ಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳಲ್ಲಿ ಜಲಧಾರೆಯ ಗಂಗಾ ರಥಗಳು ಹಾದು ಹೋಗಲಿವೆ ಎಂದು ಅವರು ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.