ಬೆಂಗಳೂರು:ಹಾಸನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಪೋಲೀಸ್ ಆಯುಕ್ತರಿಗೆ ದೂರು ನೀಡಿದೆ.


COMMERCIAL BREAK
SCROLL TO CONTINUE READING

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ,ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ.


ಇದನ್ನೂ ಓದಿ : Hassan Pen Drive Case: ನಾನು ಹೆದರಿ ಎಲ್ಲಿಯೂ ಓಡಿ ಹೋಗಲ್ಲವೆಂದ ಎಚ್.ಡಿ.ರೇವಣ್ಣ!


ಹಾಸನ ಜಿಲ್ಲೆಯಲ್ಲಿ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟು ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲವರು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಸಿರುವುದು ಸರಿ. ಈ ಪ್ರಕರಣದ ಬಗ್ಗೆ ಅವರು ಪ್ರತಿಭಟನೆ ಮಾಡುವ ವಿಚಾರದ ಬಗ್ಗೆ ನಮ್ಮ ಪಕ್ಷಕ್ಕೆ ಯಾವುದೇ ತಕರಾರು, ಆಕ್ಷೇಪ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರು ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ     ಹೆಚ್.ಡಿ.ದೇವೇಗೌಡ ಹಾಗೂ ಕರ್ನಾಟಕ ಪ್ರದೇಶ ಜನತಾದಳ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡುವ ಭರದಲ್ಲಿ ಅತ್ಯಂತ ಅಪಮಾನಕರವಾಗಿ, ಕೀಳಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಮ್ಮ ಪಕ್ಷದ ಇಬ್ಬರು ಗೌರವಾನ್ವಿತ ನಾಯಕರಿಗೆ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.ಮುಖಕ್ಕೆ ನಾಯಕರಿಬ್ಬರ ಮುಖವಾಡ ಧರಿಸಿ ಚಾರಿತ್ರ‍್ಯಕ್ಕೆ ಅಪಚಾರ ಎಸಗಿರುತ್ತಾರೆ ಎಂದು ದೂರಲಾಗಿದೆ.


ಇದನ್ನೂ ಓದಿ : 2014ಕ್ಕೇ ಮುಗಿದಿದೆ ಆಮದು ಕಾಲ; ಭಾರತ ಇನ್ನೇನಿದ್ರೂ ಆತ್ಮನಿರ್ಭರ: ಸಚಿವ ಪ್ರಲ್ಹಾದ್ ಜೋಶಿ


ಪ್ರತಿಭಟನೆಯ ವೇಳೆ  ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ. ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳಿಗೆ ಚಪ್ಪಲಿ, ಪೊರಕೆ ತೋರಿಸಿ ಅಪಚಾರ ಎಸಗಿದ್ದಾರೆ ಎಂದು ಆರೋಪ ಮಾಡಲಾಗಿದೆ. ಕಾನೂನು ಪ್ರಕಾರ ಇದು ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಬೇಕು ಏರ್ನ್ದು ಆಗ್ರಹಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.