ಇಂದು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಾಯಕರ ಪ್ರಮುಖ ಹೇಳಿಕೆಗಳು, ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಬಗ್ಗೆ ಮಹತ್ವದ ಚರ್ಚೆಗಳು ನಡೆಯಲಿದೆ.
ಬೆಂಗಳೂರು: ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನವ್ಯ ಸಮಿತಿಯ ಮಹತ್ವದ ಸಭೆ ಶುಕ್ರವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಕುಮಾರಕೃಪಾದಲ್ಲಿ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಾಯಕರ ಪ್ರಮುಖ ಹೇಳಿಕೆಗಳು, ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಬಗ್ಗೆ ಮಹತ್ವದ ಚರ್ಚೆಗಳು ನಡೆಯಲಿದೆ.
ಇದಲ್ಲದೆ, ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕಾತಿ, ಸಿದ್ದರಾಮಯ್ಯ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯಲ್ಲಿನ ಅಕ್ಕಿ ವಿತರಣೆ ಪ್ರಮಾಣದಲ್ಲಿ ಕಡಿತಕ್ಕೆ ಸೂಚನೆ, ರೈತರ ಸಾಲ ಮನ್ನಾ ಮಾಡಲು ಹಣ ಹೊಂದಿಸುವ ವಿಚಾರ, ಕೊಡಗು ಪ್ರವಾಹ ದಿಂದ ಸಂಕಷ್ಟದಲ್ಲಿರುವ ಜನತೆಗೆ ಪುನರ್ವಸತಿ ಮತ್ತು ಮೂಲಭೂತ ಸೌಲಭ್ಯ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.