ಮೈಸೂರು: ಭಾರೀ ಕುತೂಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈಸೂರು ಮಹಾನಗರಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಯಾವ ಪಕ್ಷವೂ ಬಹುಅತ ಪಡೆಯದ ಕಾರಣ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.


COMMERCIAL BREAK
SCROLL TO CONTINUE READING

ಈಬಾರಿ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಒಟ್ಟು 22 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಉಳಿದಂತೆ ಕಾಂಗ್ರೆಸ್ 19, ಜೆಡಿಎಸ್ 18 ಸ್ಥಾನಗಳಲ್ಲಿ ಜಯ ಸಾಧಿಸಿದರೆ ಬಿಎಸ್ಪಿ 1 ಕ್ಷೇತ್ರದಲ್ಲಿ ಮತ್ತು ಪಕ್ಷೇತರರು 5 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 65 ಸ್ಥಾನಗಳಿದ್ದು, ಅಧಿಕಾರ ಹಿಡಿಯಲು ಯಾವುದೇ ಪಕ್ಷವಾದರೂ 35 ಸ್ಥಾನಗಳಿಸುವುದು ಅಗತ್ಯ. ಒಂದೇ ಪಕ್ಷ ಅಷ್ಟು ಸ್ಥಾನ ಗಳಿಸದಿದ್ದರೂ, ಮೈತ್ರಿಯಿಂದ ಒಟ್ಟು 35 ಸ್ಥಾನದ ಬಹುಮತ ಸಾಧಿಸಿದರೆ ಅಧಿಕಾರ ಹಿಡಿಯುವ ಅವಕಾಶ ದೊರೆಯಲಿದೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇರುವ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯಲ್ಲೂ ಇದೇ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. 


ಮೈಸೂರು ಮಹಾನಗರ ಪಾಲಿಕೆ ಫಲಿತಾಂಶದ ಕುರಿತು ಮಾತಂದಿರುವ ಸಂಸದ ಪ್ರತಾಪ್ ಸಿಂಹ, ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವಿದ್ದರೂ ಜನರು ಆಶೀರ್ವದಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಸಹಕರಿಸಿದ್ದಾರೆ. ಈಗ ಅಧಿಕಾರ ಹಿಡಿಯಲು ಜೆಡಿಎಸ್ ಮುಂದೆ ಆಯ್ಕೆ ಇದ್ದು, ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಾರೆ ಎಂಬುದು ಅವರಿಗೆ ಬಿಟ್ಟಿದ್ದು. ಇಲ್ಲವಾದಲ್ಲಿ ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.