ಉಪಚುನಾವಣೆಯಲ್ಲಿ ಸ್ಥಳೀಯ ನಾಯಕರಿಗೆ ಟಿಕೆಟ್: ಹೆಚ್.ಡಿ.ಕುಮಾರಸ್ವಾಮಿ

ಅಕ್ಟೋಬರ್ 21 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸ್ಥಳೀಯ ಮುಖಂಡರಿಗೆ ಆದ್ಯತೆ ನೀಡಲು ಪಕ್ಷ ನಿರ್ಧರಿಸಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

Last Updated : Sep 24, 2019, 11:53 AM IST
ಉಪಚುನಾವಣೆಯಲ್ಲಿ ಸ್ಥಳೀಯ ನಾಯಕರಿಗೆ ಟಿಕೆಟ್: ಹೆಚ್.ಡಿ.ಕುಮಾರಸ್ವಾಮಿ title=

ಬೆಂಗಳೂರು:  ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಜೆಡಿಎಸ್ ಟಿಕೆಟ್ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ.

ನಗರದಲ್ಲಿಂದು ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ಅಕ್ಟೋಬರ್ 21 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸ್ಥಳೀಯ ಮುಖಂಡರಿಗೆ ಆದ್ಯತೆ ನೀಡಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಹಾಗೂ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದ್ದರಿಂದ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ ಮತ್ತು ರೇವಣ್ಣ ವಿರುದ್ಧ ಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ. 

ಅಕ್ಟೋಬರ್ 21ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಅ.24ರಂದು ಫಲಿತಾಂಶ ಹೊರಬೀಳಲಿದೆ. 
 

Trending News