ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹ
ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ,ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು.ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
ಬೆಂಗಳೂರು : ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಜೆಡಿಎಸ್ ದೂರು ನೀಡಿದೆ.ಈ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪಕ್ಷ ಒತ್ತಾಯ ಮಾಡಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ, ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು.ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ.ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
ಇದನ್ನೂ ಓದಿ : ಬೆಂಗಳೂರಿನ ‘ಸ್ಮೋಕಿ ಪಾನ್’ ತಿಂದು 12 ವರ್ಷದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಮಂಜೇಗೌಡ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ನಗರದ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್ ಅವರಿದ್ದ ನಿಯೋಗ ಬುಧವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದರು.
ದೂರಿನಲ್ಲಿ ಇನ್ನೇನು ಇದೆ? :
ಹೆಚ್.ಎಂ.ರಮೇಶ್ ಗೌಡ ಸಹಿ ಹಾಕಿರುವ ದೂರಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಅನೇಕ ಗಂಭೀರ,ಗುರುತರ ಆರೋಪಗಳನ್ನು ಮಾಡಲಾಗಿದೆ.ಕಾಂಗ್ರೆಸ್ ನಾಯಕ, ವೈನಾಡು ಲೋಕಸಭೆ ಕ್ಷೇತ್ರದ ಸಂಸದ ರಾಹುಲ್ ಗಾಂಧಿ,ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ.ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಇದೇ ಮೇ 2ರಂದು ಹೇಳಿಕೆ ನೀಡಿದ್ದರು.
ರಾಹುಲ್ ಗಾಂಧಿ ಅವರ ಹೇಳಿಕೆ, ಭಾಷಣ ಎಲ್ಲವೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.ಮುದ್ರಣ ಮಾಧ್ಯಮದಲ್ಲಿಯೂ ವರದಿಯಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಕೂಡಾ ಸಲ್ಲಿಸಲಾಗಿದೆ.
ಇದನ್ನೂ ಓದಿ : ಅಶೋಕ ವಾಟಿಕಾ ಸ್ಥಳದಲ್ಲಿರುವ ಸೀತಾಮಾತೆಯ ದೇಗುಲಕ್ಕೆ ಕುಂಭಾಭಿಷೇಕ ನೆರವೇರಿಸಿದ ಶ್ರೀ ರವಿಶಂಕರ ಗುರೂಜಿ
ನೊಂದ ಮಹಿಳೆಯರ ನ್ಯಾಯ ಕೊಡಿಸುವುದನ್ನು ಕಡೆಗಣಿಸಿ ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂಥ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ. ನಾನೂರು ಮಹಿಳೆಯರ ಮೇಲೆ ಮಾಸ್ ರೇಪ್ ಆಗಿರುವ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಎಲ್ಲಾ ಮಾಹಿತಿ ಇದೆ ಹಾಗೂ ಅತ್ಯಾಚಾರಕ್ಕೆ ತುತ್ತಾದ ಅಷ್ಟೂ ಮಹಿಳೆಯರ ಮಾಹಿತಿ ಅವರಲ್ಲಿ ಇದೆ ಎನ್ನುವುದು ಅವರದೇ ಹೇಳಿಕೆಯಿಂದ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 1860ರ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಲ್ಲಿ ಜೆಡಿಎಸ್ ಪಕ್ಷ ಒತ್ತಾಯ ಮಾಡಿದೆ.
ರಾಜ್ಯ ಸರ್ಕಾರವೂ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಿದ್ದು, ಕೂಡಲೇ ಈ ತಂಡವು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿ ಕರೆಸಬೇಕು.ನಾನೂರು ಮಹಿಳೆಯರು ಎಂದು ತಪ್ಪು ಮಾಹಿತಿ, ಸಮಾಜಕ್ಕೆ ಕೆಟ್ಟ ಸಂದೇಶ ಹೋಗುವಂತೆ ಮಾಡಿದ ಅವರ ವಿರುದ್ಧ ಕೂಡಲೇ ಸೆಕ್ಷನ್ 202, 1860ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಜೆಡಿಎಸ್ ಆಗ್ರಹಪಡಿಸಿದೆ.
ಅಲ್ಲದೆ, ಪೆನ್ ಡ್ರೈವ್ ಹಂಚಿಕೆಯ ಬಗ್ಗೆಯೂ ಜೆಡಿಎಸ್ ಡಿಜಿ ಅವರ ಜತೆ ಮಾತುಕತೆ ನಡೆಸಿತು.ಎಸ್ ಐಟಿ ಏಕಪಕ್ಷೀಯವಾಗಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ.ಆದರೆ ಪೆನ್ ಡ್ರೈವ್ ಹಂಚಿಕೆ ಆರೋಪಿಗಳ ಬಗ್ಗೆ ಮೌನ ವಹಿಸಿದೆ.ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಈವರೆಗೆ ಅವರನ್ನು ಎಸ್ ಐಟಿ ಬಂಧನ ಮಾಡಿಲ್ಲ ಎಂದು ನಿಯೋಗ ದೂರಿತು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.