ಜೆಡಿಎಸ್ ಜನತಾ ಪ್ರಣಾಳಿಕೆಯ ಮಹತ್ವದ ಅಂಶವೇನು ಗೊತ್ತೇ?
ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12ರಂದು ನಡೆಯಲಿದ್ದು, ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ನಿರತವಾಗಿವೆ.
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12ರಂದು ನಡೆಯಲಿದ್ದು, ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ನಿರತವಾಗಿವೆ. ಅಂತೆಯೇ ಜೆಡಿಎಸ್ ಈ ಬಾರಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೌಕರ ವರ್ಗಕ್ಕೆ ಆದ್ಯತೆ ನೀಡುವುದಾಗಿ ಹೇಳಿದೆ.
ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಲಿಖಿತ ಹೇಳಿಕೆ ನೀಡಿದ್ದು, ಸಾಮಾಜಿಕ ಹೊಣೆಗಾರಿಕೆಯಲ್ಲಿ, ಸಮಾಜವನ್ನು ಕಟ್ಟುವ ಕಾರ್ಯದಲ್ಲಿ ಮಹತ್ವದ ಕೊಡುಗೆ ನೀಡಿರುವ ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ, ವೇತನದಲ್ಲಿರುವ ತಾರತಮ್ಯವನ್ನು ಸರಿಪಡಿಸಲಾಗುವುದು. ಇದು ಪ್ರಣಾಳಿಕೆಯ ಮುಖ್ಯ ಅಂಶವಾಗಿದೆ ಎಂದಿದ್ದಾರೆ.
ಜೆಡಿಎಸ್ ಪಕ್ಷದ ಜನತಾ ಪ್ರಣಾಳಿಕೆಯ ಪ್ರಮುಖ ಅಂಶಗಳು ಹೀಗಿವೆ:-
ಇವು ಕರ್ನಾಟಕ, ಕನ್ನಡಿಗರ ಅಭಿವೃದ್ಧಿಯೇ ಇರುವ ಜನತಾ ಸರ್ಕಾರದ ಮುಖ್ಯ ಧ್ಯೇಯೋದ್ದೇಶಗಳು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಿಳಿಸಿದ್ದಾರೆ.