ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಇನ್ನು ಕೆಲವೇ ತಿಂಗಳು ಭಾಕಿ ಉಳಿದಿರುವುದರಿಂದ ಎಲ್ಲ ರಾಜಕೀಯ ಪಕ್ಷಗಳು ಮತ ಭೇಟೆಯ ಸರ್ಕಸ್ ಗೆ ಮುಂದಾಗಿವೆ.


COMMERCIAL BREAK
SCROLL TO CONTINUE READING

ಆ ನಿಟ್ಟಿನಲ್ಲಿ ಈಗ ರಾಜ್ಯದಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ಈಗ ಹೊಸ ಕಾರ್ಯತಂತ್ರಕ್ಕೆ ಮುಂದಾಗಿದೆ. ಅದಕ್ಕೆ ಪೂರಕವಾಗಿ ಜೆಡಿಎಸ್ ಈಗ ರಾಜ್ಯದಲ್ಲಿ ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದರ ಮೂಲಕ  ಕಾಂಗ್ರೆಸ್ ಮತ್ತು ಬಿಜೆಪಿಗೆ ಶಾಕ್ ನೀಡಲು ತಯಾರಿ ನಡೆಸಿದೆ. 


ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಾದರೆ ದಲಿತರ ಮತಗಳು ನಿರ್ಣಾಯಕವಾಗಿರುವುದರಿಂದ ಬಿಎಸ್ಪಿ ನಾಯಕಿ ಮಾಯಾವತಿ ಜೊತೆ ಮೈತ್ರಿ ವಿಷಯವಾಗಿ ಮಾಜಿ ಪ್ರಧಾನಿ ದೇವೇಗೌಡರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮೈತ್ರಿಗೆ ಮಾಯವತಿಯು ಸಹಿತ ಒಪ್ಪಿಗೆ ನೀಡಿರುವುದರಿಂದ ನಾಳೆ ನವದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಮೈತ್ರಿ ಕುರಿತು ಘೋಷಣೆ ಮಾಡಲಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.