ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
ಇದನ್ನೂ ಓದಿ: ಮಲಗುವ ಮುನ್ನ ದಿಂಬಿನ ಕೆಳಗೆ ಈ ಮಸಾಲೆ ವಸ್ತು ಇಡಿ: ಕೇವಲ 5 ದಿನದಲ್ಲಿ ಬಿಳಿಕೂದಲು ಕಡುಕಪ್ಪಾಗುತ್ತೆ! ಮರಳಿ ಬರೋದೇ ಇಲ್ಲ
ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ಆರ್.ಪ್ರಕಾಶ್ ಅವರಿದ್ದ ನಾಯಕರ ನಿಯೋಗ ಕೇಂದ್ರೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಿರುದ್ಧ ದೂರು ನೀಡಿದೆ.
ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮವೂ ಆಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆ ಗ್ಯಾರಂಟಿ ಕಾರ್ಡುಗಳ ಹಂಚಿಯನ್ನು ತಡೆಯಬೇಕು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಯೋಗವನ್ನು ಅಗ್ರಹಪಡಿಸಿದೆ.
ಅಷ್ಟೇ ಅಲ್ಲದೆ; ಜನತಾ ಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯು ಇದಾಗಿದ್ದು, ಕಾಂಗ್ರೆಸ್ ಚುನಾವಣಾ ಆಶಯವನ್ನೇ ಬುಡಮೇಲು ಮಾಡುತ್ತಿದೆ ಎಂಬ ಅಂಶವನ್ನು ಪಕ್ಷ ಆಯೋಗದ ಗಮನಕ್ಕೆ ತಂದಿದೆ.
ಇದನ್ನೂ ಓದಿ: ಬೆಳಗ್ಗೆ ಹಳಸಿದ ಬಾಯಿಗೆ ಈ ತರಕಾರಿಯ ರಸ ಕುಡಿಯಿರಿ: ದಿನಪೂರ್ತಿ ಕಂಟ್ರೋಲ್ ಇರುತ್ತೆ ಬ್ಲಡ್ ಶುಗರ್! ಅಪ್ಪಿತಪ್ಪಿಯೂ ಹೆಚ್ಚಾಗಲ್ಲ
ಅಲ್ಲದೆ, ಇಂತಹ ಭರವಸೆಗಳ ಮೂಲಕ ಕಾಂಗ್ರೆಸ್ ಕರ್ನಾಟಕ ಮತ್ತು ದೇಶದ ಆರ್ಥಿಕತೆ, ಬೊಕ್ಕಸಕ್ಕೆ ಹೊರಲಾರದ ಹೊರೆಯನ್ನು ಹೊರೆಸುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ಆಯೋಗ ಅತ್ಯಂತ ಕಠಿಣ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ