ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,ಗೆದ್ದರೆ ನಾವು ಗೆಲುವಿನ ಕಾರಣಗಳನ್ನು ಹುಡುಕಲು ಹೋಗುವುದಿಲ್ಲ. ಸೋತರೆ ಕಾರಣಗಳನ್ನು ಹುಡುಕಬೇಕಾಗುತ್ತದೆ. ನಾನು ಹುಡುಕುತ್ತಿದ್ದೇನೆ, ಆ ಕಾರಣಗಳೇನು ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: asavaraja Bommai : ಜನ ಮೆಚ್ಚುವ ರಾಜಕಾರಣ ಮಾಡಿ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ‌ ಕಿಡಿ


ಕೊನೆ ಕ್ಷಣದಲ್ಲಿ ನಾನು ನನ್ನ ಅಭ್ಯರ್ಥಿಗಳಿಗೆ ನಿರೀಕ್ಷಿತ ಆರ್ಥಿಕ ನೆರವು ಕೊಡಲಾಗಲಿಲ್ಲ. ಅಂತಿಮ ಕ್ಷಣದಲ್ಲಿ ನನ್ನ ಪಕ್ಷಗಳ ಅಭ್ಯರ್ಥಿಗಳಿಗೆ ನೆರವು ಕೊಡುವುದು ಕಷ್ಟವಾಯಿತು. ನಿಮ್ಮ ಸಹಾಯಕ್ಕೆ ನಿಲ್ಲದೆ ಹೋದ ಕಾರಣಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಅವರು ಸೋತ ಅಭ್ಯರ್ಥಿಗಳ ಕ್ಷಮೆ ಕೇಳಿದರು.


ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಿತು. ಸುಳ್ಳು ಗ್ಯಾರಂಟಿಗಳು ಹಾಗೂ ಕೂಪನ್ ಗಳನ್ನು ಕೊಟ್ಟು ಜನರಿಗೆ ವಂಚಿಸಿ ಅಧಿಕಾರಕ್ಕೆ ಬಂದಿದೆ ಕಾಂಗ್ರೆಸ್ ಕುತಂತ್ರದಿಂದ ಗೆದ್ದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮದೇ ಕುತಂತ್ರಗಾರಿಕೆ ಮಾಡಿದರು. ಅವರ ಪಕ್ಷದವರು ಒಂದು ಸಮುದಾಯವನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿದರು ಎಂದು ಟೀಕಾಪ್ರಹಾರ ನಡೆಸಿದ್ದಾರೆ ಎಂದರು.


ಇದನ್ನೂ ಓದಿ: Bangalore Marathon: ಅಕ್ಟೋಬರ್ 8ರಂದು ʼಬೆಂಗಳೂರು ಮ್ಯಾರಥಾನ್ ʼ: ಇಲ್ಲಿದೆ ನೋಡಿ ವಿವರ...


ಕಾಂಗ್ರೆಸ್, ಬಿಜೆಪಿ ಪಕ್ಷಗಳು ಹೇರಳವಾಗಿ ಹಣ ವೆಚ್ಚ ಮಾಡಿದವು, ಆಮಿಷಗಳನ್ನು ಒಡ್ಡಿದವು. ಅವುಗಳಿಗೆ ಪೈಪೋಟಿ ಕೊಡಲು ನನ್ನಿಂದ ಸಾಧ್ಯವಾಗಲಿಲ್ಲ. ನಾನು ಅಂತಹ ಕೆಲಸ ಮಾಡಲು ಹೋಗಲಿಲ್ಲ. ವೈಯಕ್ತಿಕ ನೆಲೆಗಟ್ಟಿನಲ್ಲಿ ಯಾರನ್ನೂ ನಾವು ಟೀಕೆ ಮಾಡಲಿಲ್ಲ, ತೇಜೋವಧೆ ಮಾಡಲಿಲ್ಲ, ಅಭಿವೃದ್ಧಿ ವಿಷಯ ಇಟ್ಟುಕೊಂಡು ಹೋದೆವು. ಅದಕ್ಕಾಗಿ ನಾವು ಸೋಲಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಅವರು ಬೇಸರ ವ್ಯಕ್ತಪಡಿಸಿದರು.


ಗ್ಯಾರಂಟಿಗಳ ಬಗ್ಗೆ ದನಿ ಎತ್ತಿ:


ನಾವು ಹಣದಿಂದ ಚುನಾವಣೆ ನಡೆಸಲು ಸಾಧ್ಯವಿಲ್ಲ. ರಾಜಕೀಯ ಮಾಡಲಾಗದು. ಜನರ ಮನಸ್ಸು ಗೆದ್ದು ರಾಜಕಾರಣ ಮಾಡಬೇಕು. ಈಗ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಸರಕಾರ ಈಗ ಷರತ್ತು ಅನ್ವಯ ಅನ್ನುತ್ತಿದೆ. ನಂಗೂ ಫ್ರೀ ನಿಂಗೂ ಫ್ರೀ ಎಂದವರು ಈಗ ಕಂಡಿಷನ್ಸ್ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಹೇಳಿದ್ದೇನು, ಡಿಕೆಶಿ ಹೇಳಿದ್ದೇನು? ಖರ್ಗೆ ಹೇಳಿದ್ದೇನು? ಇದನ್ನೇ ನಾವು ಜನರ ಮುಂದೆ ಇಡಬೇಕು. ಈ ಬಗ್ಗೆಯೇ ಆಂದೋಲನವನ್ನೇ ಮಾಡಬೇಕು. ಜನರ ಜತೆ ನಿಲ್ಲಬೇಕು. ಜನರನ್ನೇ ಆಂದೋಲನಕ್ಕೆ ಧುಮುಕುವಂತೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಕರೆ ನೀಡಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ